ಮಡಿಕೇರಿ, ಫೆ. 15: ತಾ. 7, 8, 9 ರಂದು ಮೂರ್ನಾಡಿನ ಪ್ರಥಮ ದರ್ಜೆ ಕಾಲೇಜಿನ ಹಳೇ ವಿದ್ಯಾರ್ಥಿಗಳ ಸಹಯೋಗದೊಂದಿಗೆ ಬ್ಲೇಜ್ ಹಾಕಿ ಸಂಘಟನೆಯು ದಿವಂಗತ ಲಾಲೂ ಮುದ್ದಯ್ಯನವರ ಜ್ಞಾಪಕಾರ್ಥಕವಾಗಿ 7ಂ siಜe ಊoಛಿಞeಥಿ ಪಂದ್ಯಾವಳಿಯನ್ನು ನಡೆಸಲಾಯಿತು.

ಅಂತಿಮ ಪಂದ್ಯದಲ್ಲಿ ಕಾವೇರಿ ಕಾಲೇಜು ಗೋಣಿಕೊಪ್ಪ ಹಾಗೂ ಮೂರ್ನಾಡಿನ ಪ್ರಥಮ ದರ್ಜೆ ಕಾಲೇಜಿನ ತಂಡಗಳ ನಡುವೆ ನಡೆದ ರೋಚಕ ಪಂದ್ಯಾಟದಲ್ಲಿ ಮೂರ್ನಾಡಿನ ಪ್ರಥಮ ದರ್ಜೆ ಕಾಲೇಜು ತಂಡ ಪ್ರಥಮ ಸ್ಥಾನವನ್ನು ಪಡೆಯುವುದರೊಂದಿಗೆ ಆಕರ್ಷಕ ಟ್ರೋಫಿಯನ್ನು ತನ್ನದಾಗಿಸಿ ಕೊಂಡಿತು. ಗೋಣಿಕೊಪ್ಪದ ಕಾವೇರಿ ಕಾಲೇಜು ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು.

ಉತ್ತಮ ಆಟಗಾರ ಪ್ರಶಸ್ತಿಯನ್ನು ವಿಜೇತ ತಂಡದ ದ್ವಿತೀಯ ಬಿ ಕಾಂ ವಿದ್ಯಾರ್ಥಿ ಪ್ರಜ್ವಲ್ ಪಡೆದುಕೊಂಡರು. ಉತ್ತಮ ಗೋಲಿ ಪ್ರಶಸ್ತಿಯನ್ನು ಮೂರ್ನಾಡಿನ ಪ್ರಥಮ ದರ್ಜೆ ಕಾಲೇಜಿನ ಮಂಜು ಪಡೆದರು ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ. ಪಟ್ಟಡ ಪೂವಣ್ಣನವರು ತಿಳಿಸಿದರು.