ಮಡಿಕೇರಿ, ಫೆ. 15: ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಡಿಕೇರಿ ಕೊಡವ ಸಮಾಜದ ಉಪಾಧ್ಯಕ್ಷ ಹಾಗೂ ಶಾಲಾ ಕಾರ್ಯಕಾರಿ ಅಧ್ಯಕ್ಷ ಚೋವಂಡ ಕಾಳಪ್ಪ ವಿದ್ಯಾರ್ಥಿಗಳಿಗೆ ಹಿತವಚನಗಳನ್ನು ನೀಡಿ ಮುಂದಿನ ಭವಿಷ್ಯಕ್ಕೆ ಶುಭಕೋರಿದರು.
ಇದೇ ಸಂದರ್ಭ ವಿದ್ಯಾರ್ಥಿಗಳು ತಮ್ಮ ಶಾಲಾ ಜೀವನದ ಅನುಭವಗಳನ್ನು ಹಂಚಿಕೊಂಡರು. ಪದವಿ ಪ್ರದಾನ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಅಲ್ಲದೇ ಶಾಲಾ ವತಿಯಿಂದ ನೆನಪಿನ ಕಾಣಿಕೆಯನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತಾಧಿಕಾರಿ ಎನ್.ಎ. ಪೊನ್ನಮ್ಮ, ಪ್ರಾಂಶುಪಾಲರಾದ ಬಿ.ಎಂ.ಸರಸ್ವತಿ, ಬೋಧಕ ಹಾಗೂ ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.