ಕೂಡಿಗೆ, ಫೆ. 16: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿ ಪುರುಷರ ಕಬಡ್ಡಿ ಹಾಗೂ ಮಹಿಳೆಯರ ಥ್ರೋಬಾಲ್ ಪಂದ್ಯಾವಳಿಗಳು ಹುದುಗೂರು ಕಾಳಿಕಾಂಭ ಯುವಕ ಸಂಘದ ಆವರಣದಲ್ಲಿ ನಡೆಯಿತು.

ಪಂದ್ಯಾಟದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯತ್ ಸದಸ್ಯೆ ಕೆ.ಅರ್ ಮಂಜುಳಾ ನೆರವೇರಿಸಿದರು. ನಂತರ ಮಾತನಾಡಿ ಗ್ರಾಮಾಂತರ ಪ್ರದೇಶಗಳಲ್ಲಿ ಇಂತಹ ಕ್ರೀಡಾಕೂಟಗಳು ನಡೆಯುವು ದರಿಂದ ಗ್ರಾಮಸ್ಥರು ಒಂದೆಡೆ ಸೇರಲು ಅವಕಾಶವಾಗುತ್ತದೆ. ಇದರ ಮೂಲಕವಾಗಿ ಗ್ರಾಮದ ಅಭಿವೃದ್ಧಿ ಕೆಲಸಗಳನ್ನು ನಿರ್ವಹಿಸಲು ಅನುಕೂಲವಾಗುತ್ತದೆ ಎಂದರು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಗಿರೀಶ್ ವಹಿಸಿದರು. ಮುಖ್ಯ ಅತಿಥಿಗಳಾಗಿ ಕೂಡಿಗೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪ್ರೇಮಲೀಲಾ, ಐಗೂರು ಗ್ರಾಮ ಪಂಚಾಯತಿ ಅಧ್ಯಕ್ಷ ಡಿ.ಎಂ. ರಮೇಶ್, ದೇವಾಲಯ ಸಮಿತಿಯ ಅಧ್ಯಕ್ಷ ಟಿ.ಎಂ. ಛಾಮಿ, ಗ್ರಾಮ ಪಂಚಾಯತಿ ಸದಸ್ಯ ಹೆಚ್.ಎಸ್. ರವಿ, ಗ್ರಾಮದ ಪ್ರಮುಖರಾದ ಗಣೇಶ ಸತೀಶ್, ಪೂವಯ್ಯ, ಟಿ.ಎಂ. ಚಿಣ್ಣಪ್ಪ, ಹುದುಗೂರು ಉಪ ಅರಣ್ಯ ಅಧಿಕಾರಿ ಸತೀಶ್‍ಕುಮಾರ್, ಉಪಸ್ಥಿತರಿ ದ್ದರು. ಕಬಡ್ಡಿ ಮತ್ತು ಥ್ರೋಬಾಲ್ ಪಂದ್ಯಾವಳಿಯಲ್ಲಿ 15 ತಂಡಗಳು ಭಾಗವಹಿಸಿದ್ದವು.