ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ
ಬೆಂಗಳೂರು, ಫೆ. 17: ರಾಜ್ಯ ವಿಧಾನಮಂಡಲ ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ರಾಜ್ಯಪಾಲ ವಜೂಭಾಯಿ ವಾಲಾ ಅವರು ವರ್ಷದ ಮೊದಲ ಅಧಿವೇಶನದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ. ಸರ್ಕಾರದ ಪ್ರಗತಿಯಲ್ಲಿರುವ ವಿವಿಧ ಯೋಜನೆಗಳು, ಜನಪ್ರಿಯ ಕಾರ್ಯಕ್ರಮಗಳ ಮಾಹಿತಿ ಒಳಗೊಂಡ 20 ಪುಟಗಳ ಸಂರಕ್ಷಿಪ್ತ ಭಾಷಣವನ್ನು ರಾಜ್ಯಪಾಲರು ಹಿಂದಿಯಲ್ಲಿ ಓದಿದರು. ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು. ಐಟಿ ಬಿಟಿ ನಗರ ಬೆಂಗಳೂರಿನಲ್ಲಿ ಸೈಬರ್ ಅಪರಾಧ ಪ್ರಕರಣಗಳನ್ನು ಹತ್ತಿಕ್ಕಲು 8 ಸೈಬರ್ ಅಪರಾಧ ನಿಗ್ರಹಿಸುವ ಪೆÇಲೀಸ್ ಠಾಣೆಗಳನ್ನು ಸ್ಥಾಪಿಸಲಾಗುತ್ತಿದ್ದು, ಭಯೋತ್ಪಾದನಾ ವಿರೋಧಿ ಘಟಕ ಅಸ್ತಿತ್ವಕ್ಕೆ ಬರುತ್ತಿದ್ದು, ಪೆÇೀಲಿಸ್ ನೇಮಕಾತಿಯಲ್ಲಿ ಶೇ. 25 ರಷ್ಟು ಮೀಸಲಾತಿ ಕಲ್ಪಿಸಲಾಗುತ್ತಿದೆ ಎಂದರು. ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ರೈತ ಕಲ್ಯಾಣ ಸರ್ಕಾರದ ಪ್ರಧಾನ ಆದ್ಯತೆಯಾಗಿದೆ. ರಾಜ್ಯ ಸರ್ಕಾರ ಕಿಸಾನ್ ಸಮ್ಮಾನ್ ಯೋಜನೆ ಅಡಿ 41 ಲಕ್ಷ ರೈತರ ಖಾತೆಗೆ ರೂ. 8.25 ಕೋಟಿ ವರ್ಗಾವಣೆ ಮಾಡಿದೆ ಎಂದರು.
ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿಗೆ ಜಯ
ಬೆಂಗಳೂರು, ಫೆ. 17: ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ನಿರೀಕ್ಷೆಯಂತೆ ಮೇಲ್ಮನೆ ಉಪಚುನಾವಣೆಯಲ್ಲಿ ಅನಾಯಾಸವಾಗಿ ಗೆಲುವು ಸಾಧಿಸಿದ್ದು, ಈ ಮೂಲಕ ತಮ್ಮ ಡಿಸಿಎಂ ಹುದ್ದೆಯನ್ನು ಭದ್ರಪಡಿಸಿ ಕೊಂಡಿದ್ದಾರೆ. ಹಲವು ನಾಟಕೀಯ ತಿರುವುಗಳ ನಡುವೆಯೂ ವಿಧಾನ ಸಭೆಯಿಂದ ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಸವದಿ ಗೆಲುವಿನ ನಗೆ ಬೀರಿದ್ದಾರೆ. ಒಂದು ಸ್ಥಾನಕ್ಕೆ ನಡೆದ ಪರಿಷತ್ ಉಪಚುನಾವಣೆಯಲ್ಲಿ ಸವದಿ ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್‍ನ ರಿಜ್ವಾಜ್ ಅರ್ಷದ್ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‍ನ ಒಂದು ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು. ಬೆಳಿಗ್ಗೆ 9 ಗಂಟೆಯಿಂದ ಮತದಾನ ಪ್ರಕ್ರಿಯೆ ಪ್ರಾರಂಭವಾಯಿತು. ಬೆಳಗ್ಗೆಯಿಂದ ಬಿಜೆಪಿ ಶಾಸಕರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು. ಉಪ ಚುನಾವಣೆಯಲ್ಲಿ ಒಟ್ಟು 120 ಮಂದಿ ಶಾಸಕರು ಮತ ಚಲಾವಣೆ ಮಾಡಿದರು.
ವನ್ಯಜೀವಿಗಳನ್ನು ರಕ್ಷಿಸಲು ಪ್ರಧಾನಿ ಕರೆ
ನವದೆಹಲಿ, ಫೆ. 17: ವನ್ಯಜೀವಿ ಮತ್ತು ಆವಾಸಸ್ಥಾನಗಳ ಸಂರಕ್ಷಣೆ, ಭಾರತದ ಸಾಂಸ್ಕೃತಿಕ ನೀತಿಗಳಲ್ಲಿ ಒಂದು ಭಾಗವಾಗಿದ್ದು ಅದು ಸಹಾನುಭೂತಿ ಮತ್ತು ಸಹಬಾಳ್ವೆಯನ್ನು ಕಲಿಸುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಹಲವಾರು ವರ್ಷಗಳಿಂದ ವನ್ಯಜೀವಿಗಳು ಮತ್ತು ಆವಾಸಸ್ಥಾನಗಳು ನಮ್ಮ ಸಾಂಸ್ಕೃತಿಕ ನೀತಿಗಳ ಭಾಗವಾಗಿ ಬಿಟ್ಟಿದೆ. ಪ್ರಕೃತಿ, ವನ್ಯಜೀವಿಗಳು ನಮ್ಮಲ್ಲಿ ಸಹಬಾಳ್ವೆ, ಸಹಾನುಭೂತಿಗಳನ್ನು ಕಲಿಸುತ್ತದೆ ಎಂದು ಪಿಎಂ ಮೋದಿ ವಿಡಿಯೊ ಕಾನ್ಫರೆನ್ಸ್ ಮೂಲಕ ವಲಸೆ ಪ್ರಭೇದಗಳ ಕುರಿತ ವಿಶ್ವಸಂಸ್ಥೆಯ ಸಮಾವೇಶ ಉದ್ದೇಶಿಸಿ ಮಾತನಾಡುವಾಗ ಹೇಳಿದರು. ನಮ್ಮ ವೇದ, ಉಪನಿಷತ್ತುಗಳಲ್ಲಿ ಕಾಡುಪ್ರಾಣಿಗಳ ಸಂರಕ್ಷಣೆ ಬಗ್ಗೆ ಹೇಳಿದ್ದಾರೆ. ಮೌರ್ಯ ಸಾಮ್ರಾಜ್ಯದ ಮಹಾನ್ ದೊರೆ ಅಶೋಕ ಅರಣ್ಯ ನಾಶ ಮತ್ತು ಪ್ರಾಣಿಗಳನ್ನು ಕೊಲ್ಲಬಾರದು ಎಂದು ಹೇಳುತ್ತಿದ್ದರು. ಭಾರತ ದೇಶ ಹಲವು ಜೈವಿಕ ಜೀವಿಗಳ ಆವಾಸಸ್ಥಾನವಾಗಿದೆ. ಇಲ್ಲಿ 4 ಜೀವ ವೈವಿಧ್ಯ ಕೇಂದ್ರಗಳಿವೆ. ವಿಶ್ವದ ಶೇ. 2.4 ರಷ್ಟು ಭೂ ಪ್ರದೇಶಗಳಲ್ಲಿ ಜೀವ ವೈವಿಧ್ಯತೆಯಿದ್ದು ಅವುಗಳಲ್ಲಿ ಶೇ. 8 ರಷ್ಟು ಕೊಡುಗೆ ಭಾರತದ್ದಾಗಿದೆ ಎಂದರು.
ಪಾಕ್ ಪರ ವಿದ್ಯಾರ್ಥಿಗಳಿಗೆ ಥಳಿತ
ಹುಬ್ಬಳ್ಳಿ, ಫೆ. 17: ಪಾಕಿಸ್ತಾನ್ ಜಿಂದಾಬಾದ್ ಎಂದು ಪಾಕಿಸ್ತಾನದ ಸೇನೆಯ ಹಾಡಿಗೆ ಪಾಕ್ ಪರ ಘೋಷಣೆ ಕೂಗಿದ ಮೂವರು ಆರೋಪಿಗಳನ್ನು ಹುಬ್ಬಳ್ಳಿ ಪೆÇಲೀಸರು ಕೊನೆಗೂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಮೂರನೇ ಜೆಎಂಎಫ್ಸಿ ನ್ಯಾಯಾಧೀಶರ ಮುಂದೆ ಹಾಜರಾದ ಮೂವರು ಆರೋಪಿಗಳಿಗೆ ಮಾರ್ಚ್ 2 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನ್ಯಾಯಾಂಗ ಬಂಧನಕ್ಕೆ ಕರೆದೊಯ್ಯುವ ವೇಳೆ ನ್ಯಾಯಾಲಯದ ಆವರಣದಲ್ಲಿ ಭಾರೀ ಹೈಡ್ರಾಮಾವೇ ನಡೆದಿದ್ದು, ಕಾಶ್ಮೀರ ವಿದ್ಯಾರ್ಥಿಗಳಿಗೆ ಹಿಂದೂಪರ ಸಂಘಟನೆಗಳು ಹಿಗ್ಗಾಮುಗ್ಗ ಥಳಿಸಿದ್ದಾರೆ. ಅಲ್ಲದೆ ಪ್ರತಿಭಟನಾಕಾರರು ಪೆÇಲೀಸ್ ಜೀಪ್‍ಗೆ ಬೂಟು ಎಸೆದ ಪ್ರಸಂಗವೂ ನಡೆಯಿತು. ಪಾಕ್ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳನ್ನು ಭಾನುವಾರ ಪೆÇಲೀಸರು ಸಿಆರ್‍ಪಿ 169 ಬಾಂಡ್ ಮೇಲೆ ಬಿಡುಗಡೆ ಮಾಡಿದರು. ತದನಂತರ ಹಿಂದೂಪರ ಸಂಘಟನೆಗಳು ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪೆÇಲೀಸರ ಕಾರ್ಯವೈಖರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನಂತರ ಪೆÇಲೀಸರು ಮತ್ತೊಮ್ಮೆ ಆರೋಪಿಗಳನ್ನು ಬಂಧಿಸಿ 2ನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
12,000 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ
ಬೆಂಗಳೂರು, ಫೆ. 17: ರಾಜ್ಯ ಬಿಜೆಪಿ ಸರ್ಕಾರ ಆದ್ಯತೆಯ ಮೇರೆಗೆ ಬೃಹತ್ ನೀರಾವರಿ ಯೋಜನೆಗಳನ್ನು ಕೈಗೊಂಡಿದ್ದು, ರಾಜ್ಯದ 12,000 ಹೆಕ್ಟೇರ್ ಪ್ರದೇಶಕ್ಕೆ ಈ ಪ್ರಸಕ್ತ ವರ್ಷದಲ್ಲಿ ನೀರಾವರಿ ಸೌಲಭ್ಯ ಕಲ್ಪಿಸುವ ಸಾಮಥ್ರ್ಯ ತೋರುತ್ತಿರುವುದು ಹೆಮ್ಮೆಯ ಸಂಗತಿ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹರ್ಷ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲ ವಜೂಬಾಯ್ ವಾಲಾ ಅವರು ಸೋಮವಾರ ರಾಜ್ಯ ವಿಧಾನಮಂಡಲದಲ್ಲಿ ಮಾಡಿದ ಭಾಷಣ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಜಲಸಂಪನ್ಮೂಲ ಇಲಾಖೆಯ ಯೋಜನೆಗಳು, ಭವಿಷ್ಯದ ಕಾರ್ಯಕ್ರಮಗಳ ಕುರಿತು ರಾಜ್ಯಪಾಲರು ಉತ್ಸುಕತೆಯಿಂದ ಮಾತನಾಡಿರುವುದು ಹೆಮ್ಮೆಯ ಸಂಗತಿ ಎಂದಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮಲಪ್ರಭಾ ಯೋಜನೆಯ ಕಾಲುವೆಗಳ ಆಧುನೀಕರಣಕ್ಕೆ 1000 ಕೋಟಿ ರೂ.ಗಳ ಅಂದಾಜು ವೆಚ್ಚಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ವಿಜಯ ನಗರ ಕಾಲುವೆಗಳ ಆಧುನೀಕರಣಕ್ಕೆ 450 ಕೋಟಿ ರೂ.ಗಳನ್ನು ಸರ್ಕಾರ ಒದಗಿಸುತ್ತಿದೆ. ಹಾಗೆಯೇ ಹೇಮಾವತಿ ನಾಲೆಯ ಆಧುನೀಕರಣಕ್ಕೆ ರೂ. 475 ಕೋಟಿ ಒದಗಿಸಲಾಗುವುದು ಎಂದರು.
ಪ್ರತಿಭಟನಾಕಾರರೊಂದಿಗೆ ಮಾತುಕತೆ
ನವದೆಹಲಿ, ಫೆ. 17: ಅಡ್ವೊಕೇಟ್ ಸಂಜಯ್ ಹೆಗ್ಡೆ, ಸಾಧನಾ ರಾಮಚಂದ್ರನ್ ಹಾಗೂ ಮತ್ತೋರ್ವರನ್ನು ಶಾಹಿನ್ ಬಾಗ್ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸುವುದಕ್ಕೆ ಸುಪ್ರೀಂಕೋರ್ಟ್ ಹೇಳಿದೆ. ನ್ಯಾ. ಎಸ್.ಕೆ. ಕೌಲ್, ಕೆ.ಎಂ. ಜೋಸೆಫ್ ಅವರಿದ್ದ ಪೀಠ, ಶಾಹಿನ್ ಬಾಗ್ ಪ್ರತಿಭಟನೆಯಿಂದ ದೆಹಲಿ ಸಂಚಾರ ವ್ಯವಸ್ಥೆಗೆ ಉಂಟಾಗುತ್ತಿರುವ ತೊಂದರೆಯನ್ನು ಸರಿಪಡಿಸಬೇಕೆಂದು ದೆಹಲಿ ಪೆÇಲೀಸರಿಗೆ ನಿರ್ದೇಶನ ಕೋರಿ ಅಡ್ವೊಕೇಟ್ ಅಮಿತ್ ಸಾಹ್ನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸುತ್ತಿತ್ತು. ಇದೇ ವೇಳೆ ಪ್ರತಿಭಟನೆಯನ್ನು ಸ್ಥಳಾಂತರ ಮಾಡುವಂತಹ ಪರ್ಯಾಯ ಮಾರ್ಗಗಳ ಬಗ್ಗೆ ಗಮನ ಹರಿಸಲು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಸಮಾಜದ ಒಂದು ವರ್ಗ ನಿರ್ದಿಷ್ಟ ದೃಷ್ಟಿಕೋನ ಹೊಂದಿದೆ. ಪ್ರತಿಭಟನೆ ನಡೆಸಲಿ, ಅದನ್ನು ಒಪೆÇ್ಪೀಣ ಆದರೆ ಪ್ರಶ್ನೆ ಇರುವುದು ಆ ಸ್ಥಳದಲ್ಲಿ ಪ್ರತಿಭಟನೆ ನಡೆಸುವುದು ಸೂಕ್ತವೇ ಎಂಬದೆಂದು ನ್ಯಾ. ಕೌಲ್ ಹೇಳಿದ್ದಾರೆ.
ಅತ್ಯಾಚಾರಿಗಳಿಗೆ ಮಾ. 3 ರಂದು ಗಲ್ಲು
ನವದೆಹಲಿ, ಫೆ. 17: ಎರಡೆರಡು ಬಾರಿ ಡೆತ್ ವಾರೆಂಟ್‍ನಿಂದ ತಪ್ಪಿಸಿಕೊಂಡಿದ್ದ ನಿರ್ಭಯಾ ಅತ್ಯಾಚಾರಿಗಳ ವಿರುದ್ಧ ಇದೀಗ ಮತ್ತೆ ಡೆತ್ ವಾರೆಂಟ್ ಜಾರಿಯಾಗಿದ್ದು ಮಾರ್ಚ್ 3 ರಂದು ಗಲ್ಲಿಗೆ ದಿನಾಂಕ ನಿಗದಿಯಾಗಿದೆ. ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯಾಗಲಿ ಎಂದು ಇಡೀ ದೇಶವೇ ಎದುರು ನೋಡುತ್ತಿದೆ. ಆದರೆ ಅಪರಾಧಿಗಳ ಕಾನೂನು ಹೋರಾಟದ ನಾಟಕಗಳ ನಂತರ ಇದೀಗ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಗೆ ದಿನಾಂಕ ನಿಗದಿಯಾಗಿದ್ದು ಮಾರ್ಚ್ 3 ರಂದು ಬೆಳಿಗ್ಗೆ 6 ಗಂಟೆಗೆ ನಾಲ್ವರು ಆರೋಪಿಗಳನ್ನೂ ನೇಣಿಗೇರಿಸಲು ಡೆತ್ ವಾರೆಂಟ್ ಜಾರಿ ಮಾಡಲಾಗಿದೆ. ನಾಲ್ವರು ಅತ್ಯಾಚಾರಿಗಳನ್ನು ಒಟ್ಟಿಗೆ ಗಲ್ಲಿಗೇರಿಸಲಾಗುತ್ತದೆ. ಅಪರಾಧಿಗಳಿಗೆ ನೇಣು ಕುಣಿಕೆ ಬಿಗಿಯುವ ಮುನ್ನ ಗಲ್ಲಿಗೇರಿಸುವ ಡಮ್ಮಿ ಪ್ರಕ್ರಿಯೆ ನಡೆಯಲಿದೆ. ಈಗಾಗಲೇ ತಿಹಾರ್ ಜೈಲಿನಲ್ಲಿ ಒಂದು ಬಾರಿ ಡಮ್ಮಿ ಪ್ರಕ್ರಿಯೆ ನಡೆಸಲಾಗಿತ್ತು. ನಿರ್ಭಯಾ ಅತ್ಯಾಚಾರಿಗಳಾದ ಮುಖೇಶ್, ಪವನ್ ಗುಪ್ತಾ, ವಿನಯ್ ಶರ್ಮಾ ಮತ್ತು ಅಕ್ಷಯ್ ಕುಮಾರ್ ಸಿಂಗ್ ವಿರುದ್ಧ ಡೆತ್ ವಾರೆಂಟ್ ಜಾರಿಗೊಳಿಸಲಾಗಿದೆ.