ಮಡಿಕೇರಿ, ಫೆ. 17: ಕಾಲೇಜು ಶಿಕ್ಷಣ ಇಲಾಖೆ, ಮಂಗಳೂರು ವಿಶ್ವವಿದ್ಯಾನಿಲಯ, ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಾಜ್ಯಶಾಸ್ತ್ರ ವಿಭಾಗ ಮತ್ತು ಐಕ್ಯೂಎಸಿ, ಮಂಗಳೂರು ವಿಶ್ವವಿದ್ಯಾನಿಲಯ ರಾಜ್ಯಶಾಸ್ತ್ರ ಅಧ್ಯಾಪಕರ ಸಂಘ ಹಾಗೂ ಕೊಡಗು ಪ್ರೆಸ್ ಕ್ಲಬ್ ಇವರ ಸಹಯೋಗದಲ್ಲಿ ರಾಜ್ಯಶಾಸ್ತ್ರ ಬೆಳಕು ಭಿತ್ತಿಪತ್ರಿಕೆಯ 7ನೇ ವರ್ಷದ ವಾರ್ಷಿಕೋತ್ಸವ ಹಾಗೂ ರಾಜ್ಯಮಟ್ಟದ ವಿಚಾರಗೋಷ್ಠಿ ಕಾರ್ಯಕ್ರಮ ತಾ. 20 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.

ಬೆಳಿಗ್ಗೆ 9.45 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಸಂಸದ ಪ್ರತಾಪ್ ಸಿಂಹ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಾಕಾರಿ ಸಮಿತಿ ಸದಸ್ಯರು ಹಾಗೂ ಶಿವಮೊಗ್ಗ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ರವಿ ಟೆಲೆಕ್ಸ್, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಟಿ.ಕೆ. ಬೋಪಯ್ಯ ಇತರರು ಪಾಲ್ಗೊಳ್ಳಲಿದ್ದಾರೆ.

ನಂತರ ಬೆಳಿಗ್ಗೆ 11.30 ಗಂಟೆಗೆ ವಿಚಾರಗೋಷ್ಠಿ ನಡೆಯಲಿದೆ. ಶಿರ್ವ ಸೇಂಟ್ ಮೇರಿಸ್ ಕಾಲೇಜಿನ ಸಹ ಪ್ರಾಧ್ಯಾಪಕ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ರಾಜ್ಯಶಾಸ್ತ್ರ ಅಧ್ಯಾಪಕರ ಸಂಘದ ಅಧ್ಯಕ್ಷ ಪ್ರೊ. ಥೋಮಸ್ ಜಿ.ಎಂ. ಅಧ್ಯಕ್ಷತೆ ವಹಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಗಳಾಗಿ ಪತ್ರಕರ್ತರು ಹಾಗೂ ಕರ್ನಾಟಕ ಕನ್ನಡ ಸಾಹಿತ್ಯ ಅಕಾಡೆಮಿಯ ಸದಸ್ಯ ಮಾಣಿಯಪಂಡ ಸಂತೋಷ ತಮ್ಮಯ್ಯ, ಪತ್ರಕರ್ತರು ಹಾಗೂ ಚಿಕ್ಕಅಳುವಾರ ಜ್ಞಾನ ಕಾವೇರಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಉಪನ್ಯಾಸಕ ಜಮೀರ್ ಅಹಮದ್ ಪಾಲ್ಗೊಳ್ಳಲಿದ್ದಾರೆ.

ಬಳಿಕ ಮಧ್ಯಾಹ್ನ 3.30 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಮೂಕೊಂಡ ಬೋಸ್ ದೇವಯ್ಯ, ಚಿಕ್ಕಅಳುವಾರ ಜ್ಞಾನ ಕಾವೇರಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ರಾಜ್ಯಶಾಸ್ತ್ರ ಉಪನ್ಯಾಸಕ ಡಾ. ಆರ್. ದೊಡ್ಡರಾಜು, ವೀರಾಜಪೇಟೆ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಪಿ. ವಿಷ್ಣು, ಬಿ. ನಾಗರಾಜು ಇತರರು ಪಾಲ್ಗೊಳ್ಳಲಿದ್ದಾರೆ.