ಕುಶಾಲನಗರ, ಫೆ. 17: ದೂರ ಶಿಕ್ಷಣ ಪರೀಕ್ಷೆ ವರದಿ ಬಗ್ಗೆ ತನಿಖೆ ಕೈಗೊಳ್ಳಲು ಕೂಡಲೇ ವಿಶೇಷ ಸಮಿತಿಯನ್ನು ಜಿಲ್ಲೆಗೆ ಕಳುಹಿಸಿಕೊಡಲಾಗುವುದು ಎಂದು ಕುವೆಂಪು ವಿಶ್ವವಿದ್ಯಾಲಯದ ಉಪಕುಲಪತಿ ಬಿ.ಪಿ. ವೀರಭದ್ರಪ್ಪ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
‘ಶಕ್ತಿ’ಯಲ್ಲಿ ವರದಿಯಾದ ವರದಿಗೆ ದೂರವಾಣಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು ಈ ಬಗ್ಗೆ ಪರೀಕ್ಷಾ ವಿಭಾಗದ ರಿಜಿಸ್ಟ್ರಾರ್ ಅವರ ನೇತೃತ್ವದಲ್ಲಿ ತನಿಖೆ ನಡೆಸಿ ಕ್ರಮಕೈಗೊಳ್ಳಲು ಆದೇಶ ನೀಡಲಾಗುತ್ತದೆ ಎಂದಿದ್ದಾರೆ. ಈ ಸಂಬಂಧ ತಕ್ಷಣ ಸಮಿತಿಯ ಸದಸ್ಯರು ಶಿವಮೊಗ್ಗದಿಂದ ಭೇಟಿ ನೀಡಲಿದ್ದಾರೆ ಎಂದ ಅವರು ಪರೀಕ್ಷೆ ಅಥವಾ ನಿಯಮಾವಳಿಯಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
- ಸಿಂಚು