ಸೋಮವಾರಪೇಟೆ, ಫೆ. 17: ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿ ಹಾಗೂ ವಿದ್ಯಾರ್ಥಿ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.
ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಮತ್ತು ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭದಲ್ಲಿ, ಕಳೆದ ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ಕಲಾ ವಿಭಾಗದ ತೇಜಸ್ವಿನಿ, ವಾಣಿಜ್ಯ ವಿಭಾಗದ ಐ. ಜರ್ಸಿ, ವಿಜ್ಞಾನ ವಿಭಾಗದ ಆಯಿಷತ್ ತಪ್ಸೀರಾ ಅವರುಗಳಿಗೆ ನಗದು ಬಹುಮಾನ ವಿತರಿಸಿ, ಅಭಿನಂದಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಮಹೇಶ್, ಕಾಲೇಜು ಪ್ರಾಂಶುಪಾಲ ಬೆಳ್ಳಿಯಪ್ಪ, ಕಾಲೇಜು ಉಪನ್ಯಾಸಕಿ ತಿಲೋತ್ತಮೆ, ಉಪನ್ಯಾಸಕ ಚಂದ್ರಶೇಖರ್, ನೋಟರಿ ವಕೀಲರಾದ ಜಿ.ಜೆ. ಗಿರೀಶ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಕೊಮಾರಪ್ಪ, ಉಪನ್ಯಾಸಕಿ ಲಲಿತ, ತ್ರಿವೇಣಿ, ಅತಿಥಿ ಉಪನ್ಯಾಸಕರಾದ ಸಿ.ಇ. ಲೀಲಾವತಿ, ಸರಿತ ಸೇರಿದಂತೆ ಇತರರು ಉಪಸ್ಥಿತರಿದ್ದರು.