ಮಡಿಕೇರಿ, ಫೆ. 18: ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ತಾ. 19 ರಂದು (ಇಂದು) ಮಧ್ಯಾಹ್ನ 2 ಗಂಟೆಗೆ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಎ.ಪಿ. ಧನಂಜಯ, ಪ್ರಾಂಶುಪಾಲ ಪಿ.ಆರ್. ವಿಜಯ, ಸಮಾಜ ಸೇವಕಿ ಆಶಾ ತಿಮ್ಮಯ್ಯ ಇತರರು ಪಾಲ್ಗೊಳ್ಳಲಿದ್ದಾರೆ.