ಮಡಿಕೇರಿ, ಫೆ. 18: ಮಹಾಶಿವರಾತ್ರಿ ಪ್ರಯುಕ್ತ ತಾ. 21 ರಂದು ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯದಲ್ಲಿ ಬೆಳಿಗ್ಗೆ 7 ಗಂಟೆಯಿಂದ ಶತರುದ್ರ ಪಾರಾಯಣ, ರುದ್ರಹೋಮ, ಕಾರ್ಯಕ್ರಮ ಹಾಗೂ ಸಂಜೆ 7 ಗಂಟೆಯಿಂದ ದೇವರ ನೃತ್ಯ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದ್ದು, ನಂತರ ರಾತ್ರಿ 11 ಗಂಟೆಯಿಂದ ಯಕ್ಷಗಾನ ಬಯಲಾಟ ಕಾರ್ಯಕ್ರಮ ನಡೆಯಲಿದೆ ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ.