ನಾಪೆÇೀಕ್ಲು, ಫೆ. 18: ಕರ್ನಾಟಕ ಸರಕಾರ ಗ್ರಾಮೀಣ ಅಭಿವೃದ್ಧಿ ನೀರು ನೈರ್ಮಲ್ಯ ಯೋಜನೆ ಇಲಾಖೆ, ಜಿಲ್ಲಾ ಪಂಚಾಯಿತಿ, ಕುಟುಂಬ ಶಿಕ್ಷಣ ಸಂಸ್ಥೆ ಆಶ್ರಯದಲ್ಲಿ ನಾಪೆÇೀಕ್ಲು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನೀರು ನೈರ್ಮಲ್ಯ ಆರೋಗ್ಯ ಕುರಿತು ವಿಶೇಷ ಸಭೆ ನಡೆಯಿತು.

ಸಭೆಯಲ್ಲಿ ನೀರು ನೈರ್ಮಲ್ಯ ಇಲಾಖೆಯ ಅಧಿಕಾರಿ ಚೇತನ್ ನೀರಿನ ಬಳಕೆಯ ಬಗ್ಗೆ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪಾಧ್ಯಕ್ಷ ಕಾಳೇಯಂಡ ಸಾಬ ತಿಮ್ಮಯ್ಯ ವಹಿಸಿದ್ದರು. ವೇದಿಕೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಶಿವಚಾಳಿಯಂಡ ಜಗದೀಶ್, ಚೋಕಿರ ರೋಷನ್, ಪಿ.ಎಂ. ಅಜೇಜ್, ಗ್ರಾಮ ಪಂಚಾಯಿತಿ ಪಿ.ಡಿ.ಓ. ಬಲ್ಲಂಡ ಚೊಂದಕ್ಕಿ, ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು, ಸ್ವಸಹಾಯ ಸಂಘದವರು, ಶಾಲಾ ಶಿಕ್ಷಕರು, ಮಕ್ಕಳು ಇದ್ದರು.