ಕೂಡಿಗೆ, ಫೆ. 18: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಡುವನಹಳ್ಳಿ ವತಿಯಿಂದ ಕ್ರೀಡಾಕೂಟ ಮತ್ತು ಶಾಲಾ ವಾರ್ಷಿಕೋತ್ಸವ ನಡೆಯಿತು. ಕ್ರೀಡಾಕೂಟದ ಉದ್ಘಾಟನೆಯನ್ನು ಎಸ್‍ಡಿಎಂಸಿ ಅಧ್ಯಕ್ಷ ಇಂದ್ರೇಶ್ ನೆರವೇರಿಸಿದರು.
ಪುರುಷರಿಗೆ, ಮಹಿಳೆಯರಿಗೆ ವಿವಿಧ ಪಂದ್ಯಾವಳಿಗಳನ್ನು ಏರ್ಪಡಿಸಲಾಗಿತ್ತು. ಸಮಾರೋಪ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಮಹಾಸ್ವಾಮೀಜಿ ಪ್ರವಚನ ನೀಡಿದರು. ಉದ್ಘಾಟನೆಯನ್ನು ಜಿಲ್ಲಾ ಪಂಚಾಯಿತಿ ಸದಸ್ಯೆ ಸರೋಜಮ್ಮ ನೆರವೇರಿಸಿದರು. ಶನಿವಾರಸಂತೆ ವಿಘ್ನೇಶ್ವರ ಬಾಲಿಕಾ ಪ್ರೌಢಶಾಲೆಯ ಉಪನ್ಯಾಸಕ ಜಯಕುಮಾರ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯಿತಿ ಸದಸ್ಯೆ ಲೀಲಾವತಿ, ಆಲೂರು ಸಿದ್ದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವೀಣಾ, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ನಾಗಮ್ಮ, ರಾಧ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಧರ್ಮಪ್ಪ ಸೇರಿದಂತೆ ಶಾಲಾ ಮುಖ್ಯ ಶಿಕ್ಷಕ ಹೆಚ್.ಕೆ. ಸುಂದರ್, ಸ್ಥಳೀಯ ಪ್ರಮುಖರು, ವಿದ್ಯಾರ್ಥಿಗಳ ಪೋಷಕರು, ಶಿಕ್ಷಕ ವೃಂದ ಭಾಗವಹಿಸಿದ್ದರು. ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸಂಗೀತ ರಸಮಂಜರಿ ಕಾರ್ಯಕ್ರಮವನ್ನು ಅನೂಪ್ ಮತ್ತು ತಂಡದವರು ನಡೆಸಿಕೊಟ್ಟರು.