ಮಡಿಕೇರಿ, ಫೆ. 18: ಮದೆ ಮಹೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ. ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭಕ್ಕೆ ಆದಿಚುಂಚನಗಿರಿ ಮೈಸೂರು ಶಾಖಾ ವಿಭಾಗದ ಕಾರ್ಯಾಧ್ಯಕ್ಷ ಶ್ರೀ ಸೋಮೇಶ್ವರನಾಥ ಸ್ವಾಮಿ ಆಗಮಿಸಿ ಆಶೀರ್ವಚನ ನೀಡಿದರು.

ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಜವರೇಗೌಡ ಭಾಗವಹಿಸಿ ಹಿತನುಡಿಯಾಡಿದರು. ಆಡಳಿತ ಮಂಡಳಿ ಉಪಾಧ್ಯಕ್ಷ ಹುದೇರಿ ರಾಜೇಂದ್ರ ವಿದ್ಯಾರ್ಥಿಗಳಿಗೆ ಪರೀಕ್ಷೆಯ ಸಿದ್ಧತೆಯ ಬಗ್ಗೆ ತಿಳಿಸಿದರು.

ಆಡಳಿತ ಮಂಡಳಿ ನಿರ್ದೇಶಕ ಜೋಯಪ್ಪ, ಪ್ರಾಂಶುಪಾಲೆ ಗುಲಾಬಿ ಜನಾರ್ಧನ್, ಬಿ.ಎಸ್. ಗಣಪತಿ, ಉಪನ್ಯಾಸಕರು, ಪೋಷಕರು ಪಾಲ್ಗೊಂಡಿದ್ದರು.