ನಾಪೆÇೀಕ್ಲು, ಫೆ. 18: ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ನಾಲ್ಕುನಾಡು ಅರಮನೆಗೆ ತೆರಳುವ ರಸ್ತೆಯನ್ನು ಲೋಕೋಪಯೋಗಿ ಇಲಾಖೆ ಸುಮಾರು ರೂ. 3 ಕೋಟಿ ವೆಚ್ಚದಲ್ಲಿ ಕಾಂಕ್ರೀಟೀಕರಣಗೊಳಿಸಿದೆ.

5.5 ಮೀಟರ್ ಅಗಲದ 2.3 ಕಿ.ಮೀ. ದೂರದ ಕಾಂಕ್ರೀಟ್ ರಸ್ತೆಯನ್ನು ನಿರ್ಮಿಸಿರುವದರಿಂದ ಸಾರ್ವಜನಿಕರು, ಪ್ರವಾಸಿಗರು ಸಂತಸಗೊಂಡಿದ್ದಾರೆ. ರಸ್ತೆ ಕಾಮಗಾರಿ ನಡೆದಿದೆ. ಆದರೆ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಶೌಚಾಲಯದ ವ್ಯವಸ್ಥೆ ಇಲ್ಲ. ಪುರುಷರು ಕಷ್ಟಪಟ್ಟು ಪರಿಸ್ಥಿತಿಗೆ ಹೊಂದಿಕೊಂಡರೆ, ಮಹಿಳೆಯರು ಮಕ್ಕಳಿಗೆ ಇದು ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಇಲ್ಲಿ ಈ ಹಿಂದೆ ಶೌಚಾಲಯ ನಿರ್ಮಿಸಿದರೂ ಕೂಡ ನೀರಿನ ವ್ಯವಸ್ಥೆ ಇಲ್ಲದ ಕಾರಣ ಅದಕ್ಕೆ ಬೀಗ ಜಡಿದು ಕಾಡುಪಾಲಾಗಿದೆ. ಸಂಬಂಧಿಸಿದವರು ಕೂಡಲೇ ಶೌಚಾಲಯದ ವ್ಯವಸ್ಥೆ ಕಲ್ಪಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಅರಮನೆಯ ಪ್ರವೇಶ ದ್ವಾರದ ಎಡಭಾಗದ ಆವರಣ ಗೋಡೆಯು ಕಳೆದ ಬಾರಿಯ ಮಳೆಗಾಲದಲ್ಲಿ ಕುಸಿದು ಬಿದ್ದಿದೆ. ಅದನ್ನು ಸಂಬಂಧಪಟ್ಟವರು ಕೂಡಲೇ ದುರಸ್ತಿಗೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. - ಪಿ.ವಿ. ಪ್ರಭಾಕರ್