ಕೂಡಿಗೆ, ಫೆ. 19: ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇಂಧನ ಉಳಿತಾಯ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲೆಯ ಪ್ರಾಂಶುಪಾಲ ಪ್ರಕಾಶ್ ನೆರವೇರಿಸಿದರು.

ನಂತರ ಮಾತನಾಡಿದ ಅವರು, ಇಂದಿನ ಆಧುನಿಕ ಜೀವನ ಶೈಲಿಯಿಂದ ಇಂಧನ ಅಗತ್ಯಕ್ಕಿಂತ ಹೆಚ್ಚಾಗಿ ಬಳಕೆಯಾಗುತ್ತಿದ್ದು, ಅನಗತ್ಯವಾಗಿ ವ್ಯರ್ಥ ಮಾಡುತ್ತಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಇಂಧನದ ಬಗ್ಗೆ ಸುರಕ್ಷತೆಯ ಬಗ್ಗೆ ಅರಿವು ಮೂಡಿಸಬೇಕು ಎಂದರು. ಈ ಸಂದರ್ಭ ಶಿಕ್ಷಕರಾದ ಚಿದಂಬರ್, ಸಂತೋಷ, ದಿನೇಶ್, ನಾಗೇಂದ್ರ, ಆಸಿಫ್, ಹರಿಣಾಕ್ಷಿ, ಕವಿತ, ಮೀನಾ ಹಾಜರಿದ್ದರು.