ಪೆರಾಜೆ, ಫೆ. 20: ಶ್ರೀ ಶಾಸ್ತಾವು ದೇವಸ್ಥಾನ ಪೆರಾಜೆ ಇದರ ಕಾಲಾವಧಿ ಜಾತ್ರೋತ್ಸವದ ಪೂರ್ವಭಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ದೇವಸ್ಥಾನ ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭ ದೇವಸ್ಥಾನದ ಆಡಳಿತ ಮೊಕ್ತೇಸರ ವಿಶ್ವನಾಥ ಕುಂಬಳಚೇರಿ, ಕಾರ್ಯದರ್ಶಿ ಹೊನ್ನಪ್ಪ, ತಕ್ಕ ಮುಖ್ಯಸ್ಥರಾದ ಭಾಸ್ಕರ ಕೋಡಿ, ಗಣಪತಿ ಕುಂಬಳಚೇರಿ, ವಿಶ್ವನಾಥ ಮೂಲೆಮಜಲು, ಪ್ರಭಾಕರ ಕೋಡಿ, ಪುರುಷೋತ್ತಮ ನಿಡ್ಯಮಲೆ, ದೇವತಕ್ಕ ರಾಜಗೋಪಾಲ ರಾಮಕಜೆ, ಸಹ ಕಾರ್ಯದರ್ಶಿ ನಿಡ್ಯಮಲೆ ಜೋಯಪ್ಪ, ದೇವಸ್ಥಾನದ ಮಾಜಿ ಪದಾಧಿಕಾರಿಗಳು, ಆಡಳಿತ ಮಂಡಳಿಯ ಹಾಗೂ ಜೀರ್ಣೋದ್ಧಾರ ಸಮಿತಿ ಸದಸ್ಯರು, ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು, ನಿರ್ದೇಶಕರು, ಜನಪ್ರತಿನಿಧಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು. ಜಾತ್ರೋತ್ಸವವು ಮಾರ್ಚ್ 9 ರಿಂದ ಏಪ್ರಿಲ್ 10 ರ ತನಕ ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ ನಡೆಯಲಿದೆ.