ಮಡಿಕೇರಿ, ಫೆ. 19: ಗ್ರೀನ್ ಡಾಟ್ ಟ್ರಸ್ಟ್ ಕಾನೂರು ವತಿಯಿಂದ ಕಾನೂರು ಚೈನ್ಗೇಟ್ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಶಿಬಿರ ನಡೆಯಿತು.
ಗ್ರಾಮ ಪಂಚಾಯಿತಿ ಸದಸ್ಯ ಕಾಡ್ಯಮಾಡ ಬೋಪಣ್ಣ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಆರೋಗ್ಯ ಸಹಾಯಕ ಮಧು, ಕಿರಿಯ ಆರೋಗ್ಯ ಸಹಾಯಕ ಮೋಹನ್, ಕಿರಿಯ ಆರೋಗ್ಯ ಸಹಾಯಕಿ ಮಂಗಳ, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಭಾಗವಹಿಸಿದ್ದರು.