ಮಡಿಕೇರಿ, ಫೆ. 19: ಕೊಡಗಿನಲ್ಲಿ ವಸತಿ ರಹಿತರಿಗೆ ಮನೆ, ಬೆಳಕಿನ ವ್ಯವಸ್ಥೆ, ರೈತರಿಗೆ ಕೃಷಿ ಚಟುವಟಿಕೆಯೊಂದಿಗೆ ಮಕ್ಕಳ ಅಧ್ಯಯನಕ್ಕೆ ತೊಂದರೆ ಆಗದಂತೆ ಸಮರ್ಪಕ ವಿದ್ಯುತ್ ಪೂರೈಕೆ ಸೇರಿದಂತೆ; ಕಾಡಾನೆ ಮತ್ತು ಹುಲಿ ಹಾವಳಿ ತಡೆಗಟ್ಟುವ ಮುಖಾಂತರ ಇತರ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ದಿಸೆಯಲ್ಲಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಮುತುವರ್ಜಿಯಿಂದ ಕೆಲಸ ನಿರ್ವಹಿಸುವಂತೆ ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ತಾಕೀತು ಮಾಡಿದರು.ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು; ಜನಪ್ರತಿನಿಧಿಗಳ ಸಲಹೆಯಂತೆ ಅಧಿಕಾರಿಗಳು ಸಾರ್ವಜನಿಕ ಕುಂದುಕೊರತೆಗಳನ್ನು ಕಾಲಮಿತಿಯೊಳಗೆ ಪೂರೈಸುವಂತೆ ಕಿವಿಮಾತು ಹೇಳಿದರು. ಮಾರ್ಚ್ ಅಂತ್ಯದೊಳಗೆ ಆಯ ಇಲಾಖೆಯ ಅಧಿಕಾರಿಗಳು ಸಂಬಂಧಪಟ್ಟ ಕಾಮಗಾರಿಗಳನ್ನು ಪೂರೈಸುವಂತೆ ತಿಳಿ ಹೇಳಿದ ಅಧ್ಯಕ್ಷರು, ಯಾವದೇ ಇಲಾಖೆಯ ಅನುದಾನ ಸದ್ವಿನಿಯೋಗಗೊಳ್ಳದೆ ಸರಕಾರಕ್ಕೆ ವಾಪಾಸಾಗದಂತೆ ಕಾಳಜಿ ವಹಿಸುವಂತೆಯೂ ನೆನಪಿಸಿದರು.ಮನೆಗೆ ಆದ್ಯತೆ : ಕೊಡಗಿನಲ್ಲಿ ಪರಿಶಿಷ್ಟ ವರ್ಗ ಮತ್ತು ಪರಿಶಿಷ್ಟ ಜಾತಿಯವರು ಸೇರಿದಂತೆ ಸೂರಿಲ್ಲದ ಪ್ರತಿಯೊಂದು ಕುಟುಂಬವನ್ನು ಗುರುತಿಸಿ ವಸತಿ ಯೋಜನೆಯಡಿ ಮನೆಗಳನ್ನು ಕಲ್ಪಿಸುವದು; ಸೌಭಾಗ್ಯ ಯೋಜನೆಯಡಿ ವಿದ್ಯುತ್ ಒದಗಿಸುವದು, ವಿಶೇಷವಾಗಿ ಹಾಡಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವದು, ಸಮಗ್ರ ಗಿರಿಜನ ಅಭಿವೃದ್ಧಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಕರ್ತವ್ಯವೆಂದು ಅಧ್ಯಕ್ಷರು ಬೊಟ್ಟು ಮಾಡಿದರು.ವಿದ್ಯುತ್ ಸಮಸ್ಯೆ ಸರಿಪಡಿಸಿ: ಪ್ರಮುಖವಾಗಿ ಜಿಲ್ಲೆಯ ವಿವಿಧ ವಿದ್ಯಾರ್ಥಿ ನಿಲಯಗಳು ಸೇರಿದಂತೆ ದಕ್ಷಿಣ ಕೊಡಗಿನ ತಿತಿಮತಿ, ಕುಟ್ಟ, ಬಾಳೆಲೆ, ಶ್ರೀಮಂಗಲ, ಬಿರುನಾಣಿ ಮುಂತಾದೆಡೆಗಳಲ್ಲಿ ಪದೇ ಪದೇ ವಿದ್ಯುತ್ ಸಮಸ್ಯೆ ಎದುರಾಗುತ್ತಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು; ತಕ್ಷಣದಿಂದ ಚೆಸ್ಕಾಂ ಅಧಿಕಾರಿಗಳು ನಿಗಾವಹಿಸಲು ಆದೇಶಿಸಿದರು. ಒಂದು ವಾರದೊಳಗೆ ಸಮಸ್ಯೆ ಸರಿಪಡಿಸಲಾಗು ವದು ಎಂದು ಚೆಸ್ಕಾಂ ಕಾರ್ಯಪಾಲಕ ಅಭಿಯಂತರ ಸೋಮಶೇಖರ್ ಹಾಗೂ ವೀರಾಜಪೇಟೆ ಉಪವಿಭಾಗದ ಅಧಿಕಾರಿ ಅಂಕಯ್ಯ ಭರವಸೆ ನೀಡಿದರು.
ಆರೋಗ್ಯಕ್ಕೆ ಆದ್ಯತೆ : ಕೇರಳ ಗಡಿಗಳಲ್ಲಿ ಕೊರೊನಾ ರೋಗ ಭಯ ಕುರಿತು ಪ್ರಸ್ತಾಪಕ್ಕೆ; ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮೋಹನ್ ಪ್ರತಿಕ್ರಿಯಿಸಿ ಕುಟ್ಟ, ಮಾಕುಟ್ಟ, ಕರಿಕೆಗಳಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಂಡಿರು ವದಾಗಿ ಸಭೆಗೆ ತಿಳಿಸಿದರು. ಅನೇಕ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ ಬಗ್ಗೆ ಉತ್ತರಿಸಿದ ಅವರು, ಈ ವಾರದಲ್ಲಿ ಮೈಸೂರು, ಮಂಗಳೂರು, ಹಾಸನದಲ್ಲಿ ವೈದ್ಯರ ನೇಮಕಾತಿ ನಡೆಯಲಿದ್ದು; ಸಾಧ್ಯವಿರುವ ಮಟ್ಟಿಗೆ ಸಮಸ್ಯೆ ಬಗೆಹರಿಸಲಾಗುವದು ಎಂದರು.
ಫಲಿತಾಂಶದತ್ತ ಗಮನ : ಜಿಲ್ಲೆಯಲ್ಲಿ ಪ್ರಾಥಮಿಕ ಹಂತದೊಂದಿಗೆ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶದತ್ತ ಎಲ್ಲಾ ಶಾಲಾ - ಕಾಲೇಜುಗಳಲ್ಲಿ ಶಿಕ್ಷಕರೊಂದಿಗೆ ಪೋಷಕರ ಸಮಿತಿ ನಿಗಾವಹಿಸುತ್ತಿದ್ದು; ಭಯ ಮುಕ್ತ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳನ್ನು ಸನ್ನದ್ಧಗೊಳಿಸಲಾಗುತ್ತಿದೆ ಎಂದು ಸಂಬಂಧಿಸಿದ ಅಧಿಕಾರಿಗಳಾದ ಮಚ್ಚಾಡೊ ಮತ್ತು ಭವಾನಿ ಭರವಸೆ ನೀಡಿದರು.
ಕಾಮಗಾರಿ ಚುರುಕುಗೊಳಿಸಿ : ಲೋಕೋಪಯೋಗಿ ಹಾಗೂ ಪಂಚಾಯತ್ರಾಜ್ ತಾಂತ್ರಿಕ ವಿಭಾಗದಿಂದ ರಸ್ತೆ, ಕುಡಿಯುವ ನೀರು, ಇನ್ನಿತರ ಮೂಲಭೂತ ಸೌಕರ್ಯ ಕೆಲಸಗಳನ್ನು ಚುರುಕು ಗೊಳಿಸುವಂತೆ ನಿರ್ದೇಶನದೊಂದಿಗೆ; ಗ್ರಾಮೀಣ ರಸ್ತೆಗಳ ಬದಿ ಕಾಡು ಕಡಿಸಿ; ಚರಂಡಿ ನಿರ್ಮಾಣ, ಗುಂಡಿಗಳನ್ನು ಮುಚ್ಚಿಸುವದು, ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳದಂತೆ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕದೊಂದಿಗೆ ಮೋಟಾರು ಯಂತ್ರ ಅಳವಡಿಕೆ, ತೆರೆದ ಬಾವಿಗಳಿಗೆ ಕ್ರಮ ವಹಿಸಲು ಸೂಚಿಸಲಾಯಿತು.
ತೆರವಿಗೆ ಆಕ್ಷೇಪ
ಸದಸ್ಯ ಮೂಕೊಂಡ ವಿಜು ಸುಬ್ರಮಣಿ ಅವರು ಜಿಲ್ಲೆಯಲ್ಲಿ ಒಂದು ಅಥವಾ ಎರಡು ಎಕರೆ ಭೂಮಿ ಒತ್ತುವರಿ ಮಾಡಿಕೊಂಡಿರುವವರನ್ನು ತೆರವುಗೊಳಿಸಬಾರದು ಎಂದು ಅವರು ಮನವಿ ಮಾಡಿದರು. ಈ ಸಂದರ್ಭ ಮಧ್ಯ ಪ್ರವೇಶಿಸಿ ಮಾತನಾಡಿದ ಶಿವುಮಾದಪ್ಪ; ಜಿಲ್ಲೆಯಲ್ಲಿ ಹಲವು ಕಂಪನಿ ಹಾಗೂ ಸಂಸ್ಥೆಗಳು ನೂರಾರು, ಸಾವಿರಾರು ಎಕರೆ ಭೂಮಿ ಒತ್ತುವರಿ ಮಾಡಿಕೊಂಡಿದ್ದು, ಇದನ್ನು ತೆರವುಗೊಳಿಸಬೇಕೆಂದು ಒತ್ತಾಯಿಸಿದರು.
ಐಟಿಡಿಪಿ ಇಲಾಖಾ ಅಧಿಕಾರಿ ಶಿವಕುಮಾರ್ ಅವರು ಅತಿಕ್ರಮಣ ಭೂಮಿ ತೆರವುಗೊಳಿಸುವ ಪ್ರಕ್ರಿಯೆ ಮುಂದುವರಿದಿದೆ. ಆದರೆ ಈ ಸಂದರ್ಭ (ಮೊದಲ ಪುಟದಿಂದ) ನ್ಯಾಯಾಲಯದಿಂದ ತಡೆಯಾಜ್ಞೆ ತರುತ್ತಾರೆ. ಆದ್ದರಿಂದ ಹಲವು ಸಮಸ್ಯೆಗಳನ್ನು ಎದುರಿಸಬೇಕಿದೆ. ಸದ್ಯ ಗ್ರಾ.ಪಂ. ವ್ಯಾಪ್ತಿಯಲ್ಲಿ ಲಭ್ಯವಿರುವ ಕಡೆ ಜಾಗ ಗುರುತಿಸುವ ಪ್ರಕ್ರಿಯೆ ನಡೆದಿದೆ ಎಂದು ಮಾಹಿತಿ ನೀಡಿದರು.
ಶಿವುಮಾದಪ್ಪ ಮಾತನಾಡಿ ನಾಗರಹೊಳೆ ವಸತಿ ಶಾಲೆಯಲ್ಲಿ ವಿದ್ಯುತ್ ಮತ್ತು ಕುಡಿಯುವ ನೀರು ಸಂಪರ್ಕ ಇಲ್ಲದೆ ತುಂಬಾ ತೊಂದರೆ ಉಂಟಾಗಿದೆ. ಒಂದು ವಾರದಲ್ಲಿ ಸರಿಪಡಿಸುವಂತಾಗಬೇಕು ಎಂದು ಆಗ್ರಹಿಸಿದರು. ಜಿಲ್ಲೆಯಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಆರಂಭವಾಗಿರುವುದು ಸಂತಸದ ವಿಚಾರ. ಆದರೆ ವೈದ್ಯಕೀಯ ವಿಜ್ಞಾನ ಸಂಸ್ಥೆ ಇದ್ದರೂ ಸಹ ಸಣ್ಣ ಕಾಯಿಲೆಗೂ ಮಂಗಳೂರು, ಮೈಸೂರಿಗೆ ಕರೆದುಕೊಂಡು ಹೋಗಲು ಚೀಟಿ ಬರೆಯುತ್ತಾರೆ. ವೈದ್ಯಕೀಯ ಕಾಲೇಜು ವಿಜ್ಞಾನ ಸಂಸ್ಥೆ ಇರುವುದಾದರೂ ಯಾರ ಪ್ರಯೋಜನಕ್ಕಾಗಿ ಎಂದು ಸದಸ್ಯೆ ಸುನಿತಾ ವಿಷಯ ಪ್ರಸ್ತಾಪಿಸಿದರು.
ಒಂದು ಸಣ್ಣ ಕಾಯಿಲೆ ಉಂಟಾಗಿದ್ದ ನೆಲ್ಯಹುದಿಕೇರಿ ಯವರನ್ನು ಮಂಗಳೂರಿಗೆ ಕರೆದುಕೊಂಡು ಹೋದ ಸಂದರ್ಭ ದಲ್ಲಿ ಕೊಡಗು ಜಿಲ್ಲೆಯಲ್ಲಿಯೇ ವೈದ್ಯಕೀಯ ಕಾಲೇಜು ಇದ್ದು, ಸಣ್ಣ ಕಾಯಿಲೆಗೂ ಇಲ್ಲಿಯವರೆಗೆ ಬರಬೇಕಿತ್ತೆ ಎಂದು ಅಲ್ಲಿನ ವೈದ್ಯರು ಹೇಳಿದಾಗ ಮುಜುಗರ ಅನುಭವಿಸು ವಂತಾಯಿತು. ಇನ್ನು ಮುಂದಾದರೂ ವೈದ್ಯಕೀಯ ವಿಜ್ಞಾನ ಸಂಸ್ಥೆ ಸಾರ್ವಜನಿಕರಿಗೆ ಸಮರ್ಪಕ ಆರೋಗ್ಯ ಸೇವೆ ಕಲ್ಪಿಸುವಂತಾಗಬೇಕು ಎಂದು ಒತ್ತಾಯಿಸಿದರು. ಈ ಬಗ್ಗೆ ಅಗತ್ಯ ಗಮನ ಹರಿಸುವಂತೆ ಅಧ್ಯಕ್ಷರು ಜಿಲ್ಲಾ ಆರೋಗ್ಯ ಅಧಿಕಾರಿಗೆ ಸೂಚಿಸಿದರು.
ಅನುದಾನ ಸಮಾನ ಹಂಚಿ
ಸಭೆಯ ಆರಂಭದಲ್ಲಿ ಮಾತನಾಡಿದ ಜಿ.ಪಂ.ಸದಸ್ಯ ಪುಟ್ಟರಾಜು ಸರಕಾರದಿಂದ ಬಿಡುಗಡೆಯಾದ ಅನುದಾನವನ್ನು ಎಲ್ಲಾ ಕ್ಷೇತ್ರಗಳಿಗೆ ಸಮಾನವಾಗಿ ಹಂಚಿಕೆ ಮಾಡಬೇಕು. ಇದರಿಂದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯ ಎಂದು ಸಲಹೆ ಮಾಡಿದರು. ಮಧ್ಯ ಪ್ರವೇಶಿಸಿ ಮಾತನಾಡಿದ ಸದಸ್ಯ ಮುರಳಿ ಕರುಂಬಮ್ಮಯ್ಯ ಅವರು ಕ್ರಿಯಾಯೋಜನೆಗೆ ಅನುಮೋದನೆ ದೊರೆತಿದ್ದು, ಎಲ್ಲಾ ಕ್ಷೇತ್ರಗಳಿಗೂ ಸಮಾನ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದರು.
ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್ (ಮೊದಲ ಪುಟದಿಂದ) ನ್ಯಾಯಾಲಯದಿಂದ ತಡೆಯಾಜ್ಞೆ ತರುತ್ತಾರೆ. ಆದ್ದರಿಂದ ಹಲವು ಸಮಸ್ಯೆಗಳನ್ನು ಎದುರಿಸಬೇಕಿದೆ. ಸದ್ಯ ಗ್ರಾ.ಪಂ. ವ್ಯಾಪ್ತಿಯಲ್ಲಿ ಲಭ್ಯವಿರುವ ಕಡೆ ಜಾಗ ಗುರುತಿಸುವ ಪ್ರಕ್ರಿಯೆ ನಡೆದಿದೆ ಎಂದು ಮಾಹಿತಿ ನೀಡಿದರು.
ಶಿವುಮಾದಪ್ಪ ಮಾತನಾಡಿ ನಾಗರಹೊಳೆ ವಸತಿ ಶಾಲೆಯಲ್ಲಿ ವಿದ್ಯುತ್ ಮತ್ತು ಕುಡಿಯುವ ನೀರು ಸಂಪರ್ಕ ಇಲ್ಲದೆ ತುಂಬಾ ತೊಂದರೆ ಉಂಟಾಗಿದೆ. ಒಂದು ವಾರದಲ್ಲಿ ಸರಿಪಡಿಸುವಂತಾಗಬೇಕು ಎಂದು ಆಗ್ರಹಿಸಿದರು. ಜಿಲ್ಲೆಯಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಆರಂಭವಾಗಿರುವುದು ಸಂತಸದ ವಿಚಾರ. ಆದರೆ ವೈದ್ಯಕೀಯ ವಿಜ್ಞಾನ ಸಂಸ್ಥೆ ಇದ್ದರೂ ಸಹ ಸಣ್ಣ ಕಾಯಿಲೆಗೂ ಮಂಗಳೂರು, ಮೈಸೂರಿಗೆ ಕರೆದುಕೊಂಡು ಹೋಗಲು ಚೀಟಿ ಬರೆಯುತ್ತಾರೆ. ವೈದ್ಯಕೀಯ ಕಾಲೇಜು ವಿಜ್ಞಾನ ಸಂಸ್ಥೆ ಇರುವುದಾದರೂ ಯಾರ ಪ್ರಯೋಜನಕ್ಕಾಗಿ ಎಂದು ಸದಸ್ಯೆ ಸುನಿತಾ ವಿಷಯ ಪ್ರಸ್ತಾಪಿಸಿದರು.
ಒಂದು ಸಣ್ಣ ಕಾಯಿಲೆ ಉಂಟಾಗಿದ್ದ ನೆಲ್ಯಹುದಿಕೇರಿ ಯವರನ್ನು ಮಂಗಳೂರಿಗೆ ಕರೆದುಕೊಂಡು ಹೋದ ಸಂದರ್ಭ ದಲ್ಲಿ ಕೊಡಗು ಜಿಲ್ಲೆಯಲ್ಲಿಯೇ ವೈದ್ಯಕೀಯ ಕಾಲೇಜು ಇದ್ದು, ಸಣ್ಣ ಕಾಯಿಲೆಗೂ ಇಲ್ಲಿಯವರೆಗೆ ಬರಬೇಕಿತ್ತೆ ಎಂದು ಅಲ್ಲಿನ ವೈದ್ಯರು ಹೇಳಿದಾಗ ಮುಜುಗರ ಅನುಭವಿಸು ವಂತಾಯಿತು. ಇನ್ನು ಮುಂದಾದರೂ ವೈದ್ಯಕೀಯ ವಿಜ್ಞಾನ ಸಂಸ್ಥೆ ಸಾರ್ವಜನಿಕರಿಗೆ ಸಮರ್ಪಕ ಆರೋಗ್ಯ ಸೇವೆ ಕಲ್ಪಿಸುವಂತಾಗಬೇಕು ಎಂದು ಒತ್ತಾಯಿಸಿದರು. ಈ ಬಗ್ಗೆ ಅಗತ್ಯ ಗಮನ ಹರಿಸುವಂತೆ ಅಧ್ಯಕ್ಷರು ಜಿಲ್ಲಾ ಆರೋಗ್ಯ ಅಧಿಕಾರಿಗೆ ಸೂಚಿಸಿದರು.
ಅನುದಾನ ಸಮಾನ ಹಂಚಿ
ಸಭೆಯ ಆರಂಭದಲ್ಲಿ ಮಾತನಾಡಿದ ಜಿ.ಪಂ.ಸದಸ್ಯ ಪುಟ್ಟರಾಜು ಸರಕಾರದಿಂದ ಬಿಡುಗಡೆಯಾದ ಅನುದಾನವನ್ನು ಎಲ್ಲಾ ಕ್ಷೇತ್ರಗಳಿಗೆ ಸಮಾನವಾಗಿ ಹಂಚಿಕೆ ಮಾಡಬೇಕು. ಇದರಿಂದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯ ಎಂದು ಸಲಹೆ ಮಾಡಿದರು. ಮಧ್ಯ ಪ್ರವೇಶಿಸಿ ಮಾತನಾಡಿದ ಸದಸ್ಯ ಮುರಳಿ ಕರುಂಬಮ್ಮಯ್ಯ ಅವರು ಕ್ರಿಯಾಯೋಜನೆಗೆ ಅನುಮೋದನೆ ದೊರೆತಿದ್ದು, ಎಲ್ಲಾ ಕ್ಷೇತ್ರಗಳಿಗೂ ಸಮಾನ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದರು.
ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್ ಅವರು ಕೊಡಗು ಜಿಲ್ಲೆಯಲ್ಲಿ ರೈತರ ಹಲವು ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಆ ನಿಟ್ಟಿನಲ್ಲಿ ಕಾರ್ಯಕ್ರಮಗಳು ಜರುಗುತ್ತಿವೆ ಎಂದು ತಿಳಿಸಿದರು. ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಬಾನಂಡ ಎನ್.ಪ್ರತ್ಯು ರೈತರ ಸಾಲ ಮನ್ನಾ ಸಮರ್ಪಕವಾಗಿ ಆಗಬೇಕು. ರೈತರ ಸಂಕಷ್ಟ ನಿವಾರಣೆ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕಿದೆ; ಕೊಡಗಿನಲ್ಲಿ ಕಾಡು ಪ್ರಾಣಿಗಳ ಹಾವಳಿ ವಿಪರೀತವಾಗಿದ್ದು, ಇಂತಹ ಜ್ವಲಂತ ಸಮಸ್ಯೆಗಳ ಬಗ್ಗೆ ಜಿ.ಪಂ.ಸಾಮಾನ್ಯ ಸಭೆಯಲ್ಲಿ ಬೆಳಕು ಚೆಲ್ಲುವ ಕಾರ್ಯವಾಗಬೇಕಿದೆ ಎಂದು ಅವರು ಹೇಳಿದರು.
ಎಸ್ಎಸ್ಎಲ್ಸಿ ಪರೀಕ್ಷೆ ಉತ್ತಮ ಪಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಮನೆ ಪಾಠ ಹೇಳಿಕೊಡಬೇಕು. ವಿಶೇಷ ತರಗತಿಗಳನ್ನು ನಡೆಸುವಂತೆ ಜಿ.ಪಂ. ಅಧ್ಯಕ್ಷರು ಸಲಹೆ ಮಾಡಿದರು. ಈ ಬಗ್ಗೆ ಮಾಹಿತಿ ನೀಡಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಚ್ಚಾಡೋ ಅವರು ಎಸ್ಎಸ್ಎಲ್ಸಿ ಪರೀಕ್ಷೆ ಉತ್ತಮಪಡಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿವೆ ಎಂದರು.
ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿ ಮಾತನಾಡಿದ ಜಿ.ಪಂ.ಸದಸ್ಯೆ ಸುನಿತಾ ಅವರು ಕಳೆದ ವರ್ಷ ಮೂರು ಬಾರಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲಾಗಿತ್ತು, ಪ್ರಸಕ್ತ ವರ್ಷ ಒಂದು ಬಾರಿ ಮಾತ್ರ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲಾಗಿದೆ. ಇದರಿಂದ ಹೆಚ್ಚಿನ ಫಲಿತಾಂಶ ನಿರೀಕ್ಷಿಸಲು ಸಾಧ್ಯವೇ ಎಂದು ಗಮನ ಸೆಳೆದರು. ಈ ಕುರಿತು ಪ್ರತಿಕ್ರಿಯಿಸಿದ ಡಿಡಿಪಿಐ ಮಚ್ಚಾಡೋ ಅವರು ಹೆಚ್ಚು ಪರೀಕ್ಷೆ ಇದ್ದಲ್ಲಿ ಮಕ್ಕಳು ಭಯ ಪಡುತ್ತಾರೆ. ಪರೀಕ್ಷಾ ಭಯ ಹೋಗಲಾಡಿಸಲು ಈ ಬಾರಿ ಒಂದು ಬಾರಿ ಮಾತ್ರ ಪೂರ್ವ ಸಿದ್ಧತಾ ಪರೀಕ್ಷೆ ನಡೆದಿದೆ ಎಂದು ಮಾಹಿತಿ ನೀಡಿದರು.
ನೆಲ್ಲಿಹುದಿಕೇರಿ ಪದವಿ ಪೂರ್ವ ಕಾಲೇಜಿನ ಮೂವರು ವಿಜ್ಞಾನ ಉಪನ್ಯಾಸಕರು ನವೆಂಬರ್ ತಿಂಗಳಲ್ಲಿ ವರ್ಗಾವಣೆಗೊಂಡಿದ್ದಾರೆ. ಇದರಿಂದ ವಿದ್ಯಾರ್ಥಿಗಳಿಗೆ ಅನಾನುಕೂಲ ವಾಗಿದೆ. ಇಲ್ಲಿಗೆ ಉಪನ್ಯಾಸಕರನ್ನು ನಿಯೋಜಿಸಬೇಕು ಎಂದು ಸುನಿತಾ ಒತ್ತಾಯಿಸಿದರು.
ಉಪನ್ಯಾಸಕರ ನೇಮಕ
ಈ ಬಗ್ಗೆ ಮಾಹಿತಿ ನೀಡಿದ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಭವಾನಿ ಅವರು; ಸದ್ಯ ತಾತ್ಕಾಲಿಕವಾಗಿ ವಾರದಲ್ಲಿ ಮೂರು ದಿನಗಳ ಕಾಲ ಉಪನ್ಯಾಸಕ ರನ್ನು ನಿಯೋಜಿಸಲಾಗಿದೆ. ಸರ್ಕಾರ ದಿಂದ ಖಾಯಂ ಉಪನ್ಯಾಸಕರ ನೇಮಕ ಪ್ರಕ್ರಿಯೆ ನಡೆದಿದೆ ಎಂದು ತಿಳಿಸಿದರು. ಸದಸ್ಯೆ ಅಪ್ಪಂಡೇರಂಡ ಭವ್ಯ ಮಾತನಾಡಿ ಜಿಲ್ಲೆಯ ಹಲವು ಶಾಲೆಗಳಲ್ಲಿ ದೈಹಿಕ ಶಿಕ್ಷಕರ ಕೊರತೆ ಇದ್ದು, ದೈಹಿಕ ಶಿಕ್ಷಕರನ್ನು ತಕ್ಷಣವೇ ನಿಯೋಜಿಸಬೇಕು. ಶಿಕ್ಷಣದ ಜೊತೆಗೆ ಆಟವು ಸಹ ಅತ್ಯಗತ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಒಂದು ಶಾಲೆಯಲ್ಲಿ ಕನಿಷ್ಟ 150 ವಿದ್ಯಾರ್ಥಿಗಳು ಇದ್ದಲ್ಲಿ ಒಬ್ಬ ದೈಹಿಕ ಶಿಕ್ಷಕರನ್ನು ನಿಯೋಜಿಸುವ ಮಾಹಿತಿ ಇದೆ. ಆದರೆ ಕೊಡಗು ಜಿಲ್ಲೆಯಲ್ಲಿ ಒಂದು ಶಾಲೆಯಲ್ಲಿ 150 ವಿದ್ಯಾರ್ಥಿಗಳು ಇದ್ದಾರೆಯೇ ಎಂದು ಪ್ರಶ್ನಿಸಿದರು. ಆದ್ದರಿಂದ ಕೊಡಗು ಜಿಲ್ಲೆಗೆ ವಿಶೇಷ ಆದ್ಯತೆ ನೀಡಿ 50 ಮಕ್ಕಳಿರುವ ಶಾಲೆಗಳಿಗಾದರೂ ದೈಹಿಕ ಶಿಕ್ಷಕರನ್ನು ನಿಯೋಜಿಸಬೇಕು ಎಂದು ಮನವಿ ಮಾಡಿದರು. ಈ ಸಂದರ್ಭ ಮಾತನಾಡಿದ ಸದಸ್ಯೆ ಪಂಕಜ ಅವರು ಶಿಕ್ಷಣ ಹಕ್ಕು ಕಾಯ್ದೆಯಡಿ ಬಡ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ ದೊರೆಯುತ್ತಿದೆಯೇ ಎಂದು ಅವರು ಗಮನ ಸೆಳೆದರು.
ಜಿಲ್ಲೆಯಲ್ಲಿ ಹಲವು ಪ್ರಾಥಮಿಕ, ಸಮುದಾಯ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇದ್ದು, ವೈದ್ಯರನ್ನು ನಿಯೋಜಿ ಸಬೇಕು ಎಂದು ಮನವಿ ಮಾಡಿದರು.
ಕೊರೊನಾ ವೈರಸ್ ಸಂಬಂಧಿಸಿ ದಂತೆ ಮಾಹಿತಿ ಪಡೆದ ಜಿ.ಪಂ. ಅಧ್ಯಕ್ಷರು ಆರೋಗ್ಯಕ್ಕೆ ಸಂಬಂಧಿಸಿ ದಂತೆ ಹೆಚ್ಚಿನ ಜಾಗೃತಿ ಮೂಡಿಸು ವಂತೆ ಸಲಹೆ ಮಾಡಿದರು. ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು ಈ ಬಗ್ಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸದಸ್ಯ ಲತೀಫ್ ಮಾತನಾಡಿ ಸುಂಟಿಕೊಪ್ಪ ಸಮುದಾಯ ಆಸ್ಪತ್ರೆಗೆ ಹೆಚ್ಚುವರಿ ವೈದ್ಯರನ್ನು ನಿಯೋಜಿಸು ವಂತೆ ಅವರು ಮನವಿ ಮಾಡಿದರು. ಸದಸ್ಯರಾದ ಕೆ.ಪಿ. ಚಂದ್ರಕಲಾ, ಪುಟ್ಟರಾಜು, ಸರೋಜಮ್ಮ ಪೂರ್ಣಿಮಾ ಗೋಪಾಲ್ ಅವರು ವೈದ್ಯರ ಕೊರತೆ ನಿವಾರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಸದಸ್ಯೆ ಭವ್ಯ ಮಾತನಾಡಿ ಪೊನ್ನಂಪೇಟೆಯ ಕ್ರೀಡಾ ವಸತಿ ಶಾಲೆಯಲ್ಲಿ ರಾತ್ರಿ ವೇಳೆಯಲ್ಲಿ ವಿದ್ಯುತ್ ಇಲ್ಲದೆ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನಾನುಕೂಲವಾಗಿದೆ.
ಇತ್ತೀಚೆಗೆ ಕ್ರೀಡಾ ವಸತಿ ಶಾಲೆ ಪ್ರವೇಶ ಆಯ್ಕೆ ಪ್ರಕ್ರಿಯೆ ಸಮರ್ಪಕ ವಾಗಿ ನಡೆದಿಲ್ಲ ಎಂಬ ಬಗ್ಗೆ ದೂರುಗಳು ಕೇಳಿ ಬರುತ್ತಿದ್ದು, ಇದನ್ನು ಪರಿಶೀಲಿಸುವಂತೆ ಸದಸ್ಯ ಪುಟ್ಟರಾಜು ಹಾಗೂ ಚಂದ್ರಕಲಾ, ಶಿವು ಮಾದಪ್ಪ ಒತ್ತಾಯಿಸಿದರು. ಈ ಕುರಿತು ಮಾತನಾಡಿದ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ್ ಕಾರ್ಯಪ್ಪ ಆಯ್ಕೆ ಪ್ರಕ್ರಿಯೆಯಲ್ಲಿ ತಜ್ಞರನ್ನು ನಿಯೋಜಿಸಲಾಗಿದ್ದು, ಯಾವುದೇ ರೀತಿಯ ಗೊಂದಲವಿಲ್ಲ ಎಂದು ತಿಳಿಸಿದರು. ಬಾನಂಡ ಪ್ರಥ್ಯು ಮಾತನಾಡಿ ಬಾಳೆಲೆಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ. ಆದರೆ ಇದುವರೆಗೆ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಚಾಲನೆ ನೀಡಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಸದಸ್ಯ ಮುರುಳಿ ಕರುಂಬಮ್ಮಯ್ಯ ಮಾತನಾಡಿ ನಾಪೋಕ್ಲು ಪಟ್ಟಣದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಇದುವರೆಗೂ ಜಾಗ ಗುರುತಿಸಲು ಸಾಧ್ಯವಾಗಿಲ್ಲ ಎಂದು ತೀವ್ರ ಅತೃಪ್ತಿ ವ್ಯಕ್ತಪಡಿಸಿದರು. ಸದಸ್ಯ ಲತೀಫ್ ಮಾತನಾಡಿ ದಿಡ್ಡಳ್ಳಿಯ 528 ಆದಿವಾಸಿ ಕುಟುಂಬಗಳಿಗೆ ಈಗಾಗಲೇ ಮನೆ ಹಂಚಿಕೆ ಮಾಡಿ ಹಸ್ತಾಂತರಿ ಸಲಾಗಿದೆ. ಆದರೆ ಇದುವರೆಗೆ ಹಕ್ಕುಪತ್ರ ನೀಡಿಲ್ಲ ಎಂದು ಗಮನ ಸೆಳೆದರು. ಸದಸ್ಯೆ ಸರಿತಾ ಪೂಣಚ್ಚ ನಾಗರಹೊಳೆ ವ್ಯಾಪ್ತಿಯ ಗಿರಿಜನ ಆದಿವಾಸಿ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡಬೇಕು ಎಂದು ಒತ್ತಾಯಿಸಿದರು. ಶಿವು ಮಾದಪ್ಪ ಮಾತನಾಡಿ ಬಾಳೆಲೆ, ಕುಟ್ಟ, ಶ್ರೀಮಂಗಲ ಮತ್ತಿತರ ಕಡೆಗಳಲ್ಲಿ ಪ್ರತೀ ನಿತ್ಯ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದೆ. ಸಮಸ್ಯೆಯನ್ನು ಪರಿಹರಿಸುವುದು ಯಾವಾಗ ಅಸಮಾಧಾನ ವ್ಯಕ್ತಪಡಿಸಿದರು.
ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರು ಸಮಸ್ಯೆ ಉಂಟಾಗದಂತೆ ಎಚ್ಚರ ವಹಿಸಬೇಕು. ಕುಡಿಯುವ ನೀರು ಕಾಮಗಾರಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಸದಸ್ಯೆ ಕುಮುದ ಧರ್ಮಪ್ಪ ಒತ್ತಾಯಿಸಿದರು. ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾ.ಪಂ. ಅಧ್ಯಕ್ಷರುಗಳಾದ ಶೋಭಾ ಮೋಹನ್, ಸ್ಮಿತಾ ಪ್ರಕಾಶ್, ಪುಷ್ಪ ರಾಜೇಶ್ ಸೇರಿದಂತೆ ಇತರ ಜಿ.ಪಂ. ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಇಲಾಖೆ ವಾರು ಪ್ರಗತಿಯ ಅನುಪಾಲನಾ ವರದಿ ನೀಡಲಾಯಿತು.