ಮಡಿಕೇರಿ, ಫೆ. 19: ಕಾಲೇಜು ಶಿಕ್ಷಣ ಇಲಾಖೆ, ಮಂಗಳೂರು ವಿಶ್ವವಿದ್ಯಾನಿಲಯ, ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಾಜ್ಯಶಾಸ್ತ್ರ ವಿಭಾಗ ಮತ್ತು ಐಕ್ಯೂಎಸಿ, ಮಂಗಳೂರು ವಿಶ್ವವಿದ್ಯಾನಿಲಯ ರಾಜ್ಯಶಾಸ್ತ್ರ ಅಧ್ಯಾಪಕರ ಸಂಘ ಹಾಗೂ ಕೊಡಗು ಪ್ರೆಸ್‍ಕ್ಲಬ್ ಇವರ ಸಹಯೋಗದಲ್ಲಿ ರಾಜ್ಯಶಾಸ್ತ್ರ ಬೆಳಕು ಭಿತ್ತಿಪತ್ರಿಕೆಯ 7ನೇ ವರ್ಷದ ವಾರ್ಷಿಕೋತ್ಸವ ಹಾಗೂ ರಾಜ್ಯ ಮಟ್ಟದ ವಿಚಾರಗೋಷ್ಠಿ ಕಾರ್ಯಕ್ರಮವು ಫೆಬ್ರವರಿ, 20 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.