ಮಡಿಕೇರಿ, ಫೆ. 19 : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ಕಾಲೇಜಿಗೆ ನೂತನ ಮಹಾದ್ವಾರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ.

ಕಾಲೇಜಿನ ಈಗ ಇರುವ ಪ್ರವೇಶ ದ್ವಾರವನ್ನು ತೆರವು ಮಾಡಿ ಹೊಸದಾಗಿ ರೂ.3 ಲಕ್ಷ ವೆಚ್ಚದಲ್ಲಿ ನೂತನ ಮಹಾದ್ವಾರ ನಿರ್ಮಿಸಲಾಗುತ್ತಿದೆ. ಈ ಹಿನ್ನೆಲೆ ಇಂದು ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಗುತ್ತಿಗೆದಾರ ಕಗ್ಗೋಡ್ಲುವಿನ ರಾಜು ಎಂಬವರು ಗುತ್ತಿಗೆ ಪಡೆದಿದ್ದು, ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷೆ ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ತಿಳಿಸಿದ್ದಾರೆ.

ಈ ಸಂದರ್ಭ ಸಂಘದ ಉಪಾಧ್ಯಕ್ಷ ನಾಟೋಳಂಡ ಚರ್ಮಣ, ಕಾರ್ಯದರ್ಶಿ ಬೊಳ್ಳಜಿರ ಬಿ. ಅಯ್ಯಪ್ಪ, ನಿರ್ದೇಶಕರಾದ ಬಲ್ಯಂಡ ಕೆ. ನಂಜಪ್ಪ, ಕಿಶೋರ್ ರೈ ಕತ್ತಲೆಕಾಡು, ಬಿದ್ದಂಡ ಕಾವೇರಿ ನಂಜಪ್ಪ, ಕಾಲೇಜು ಪ್ರಾಂಶುಪಾಲ ಡಾ. ಜಗತ್ ತಿಮ್ಮಯ್ಯ, ಪ್ರೊ. ರವಿಶಂಕರ್ ಹಾಗೂ ಇತರರಿದ್ದರು.