ನಾಪೆÇೀಕ್ಲು, ಫೆ. 19: ನಾಪೆÇೀಕ್ಲು ಸಮೀಪದ ಫಾರಂ ಬಳಿ ಇರುವ ಹಿಂದೂ ರುದ್ರಭೂಮಿಯಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಸಹಕಾರದೊಂದಿಗೆ ಸುಮಾರು ರೂ. 6 ಲಕ್ಷ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಚಿತಾಗಾರಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯ ಮುರುಳೀಧರ್, ತಾಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭ ತಾಲೂಕು ಪಂಚಾಯಿತಿ ಸದಸ್ಯೆ ಉಮಾಪ್ರಭು, ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎ. ಇಸ್ಮಾಯಿಲ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕಾಳೇಯಂಡ ಸಾಬ ತಿಮ್ಮಯ್ಯ, ಸದಸ್ಯರಾದ ಶಿವಚಾಳಿಯಂಡ ಜಗದೀಶ್, ಮಾಚೇಟ್ಟಿರ ಕುಶು ಕುಶಾಲಪ್ಪ, ಚೋಕಿರ ರೋಷನ್, ಆರ್.ಎಂ.ಸಿ. ಅಧ್ಯಕ್ಷ ಅಂಬಿ ಕಾರ್ಯಪ್ಪ, ಚೋಕಿರ ಸಜಿತ್, ಬಿ.ಎಂ. ಪ್ರತೀಫ್, ಜಾಲಿ, ವಿನಯ್, ಕಿರಣ್ ಮತ್ತಿತರರು ಇದ್ದರು.