ಮಡಿಕೇರಿ, ಫೆ. 20: ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ಸಂಶೋಧನಾ ಕೇಂದ್ರದಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ಮಹಾಪ್ರಬಂಧಕ್ಕೆ ಡಾ. ಉಜ್ವಲ್ ಯು.ಜೆ. ಅವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಇವರು ಮಡಿಕೇರಿಯ ಚೆಂಬು ಗ್ರಾಮದ ಊರುಬೈಲು ದಿ. ಯು.ಪಿ. ಜಯಪ್ರಕಾಶ್, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಮತ್ತು ಲೀಲಾವತಿ ಯು.ಜೆ. ದಂಪತಿಯ ಪುತ್ರ.