ಮಡಿಕೇರಿ, ಫೆ. 20: ರಸ್ತೆ ಸಂಚಾರ ಗಣತಿಯು 2020ನೇ ಸಾಲಿನಲ್ಲಿ ತಾ. 19 ರಂದು ಆರಂಭಗೊಂಡಿದ್ದು, ತಾ. 26 ರ ಬೆಳಿಗ್ಗೆ 6 ಗಂಟೆಯವರೆಗೆ ಸತತವಾಗಿ 7 ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿನ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಆಯ್ದ ಸ್ಥಳಗಳಲ್ಲಿ ನಡೆಯಲಿದೆ.
ಗಣತಿ ಕಾರ್ಯ ನಡೆಯುವ ಸ್ಥಳದಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲಾಗಿದ್ದು, ಈ ಗಣತಿ ಕೇಂದ್ರಗಳಲ್ಲಿ ಒಂದು ನಿಮಿಷ ವಾಹನ ನಿಲ್ಲಿಸುವ ಮೂಲಕ ರಸ್ತೆ ಸಂಚಾರ ಗಣತಿಗೆ ವಾಹನ ಚಾಲಕರು ಮತ್ತು ಸಾರ್ವಜನಿಕರು ಸಹಕರಿಸುವಂತೆ ಮಂಗಳೂರು ವೃತ್ತ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಅಧೀಕ್ಷಕ ಇಂಜಿನಿಯರ್ ಕೋರಿದ್ದಾರೆ.