ಮಡಿಕೇರಿ, ಫೆ. 20: ಕೋಲಾರ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ಇವರ ಸಂಯುಕ್ತ ಆಶ್ರಯದಲ್ಲಿ ಕೋಲಾರದ ಪಬ್ಲಿಕ್ ಎಜುಕೇಶನ್ ಇನ್ಸ್ಟಿಟ್ಯೂಟ್‍ನಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಗೋಣಿಕೊಪ್ಪ ಸಮೀಪದ ಕಳತ್ಮಾಡು ಲಯನ್ಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ದಿಶಾ ದೇಚಮ್ಮ ಪ್ರೌಢಶಾಲಾ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.