ಮಡಿಕೇರಿ, ಫೆ. 20: ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿಗಳಿಂದ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಪ್ರಾಸ್ತಾವಿಕವಾಗಿ ಮಾತನಾಡಿದ ರಾಜ್ಯಶಾಸ್ತ್ರ ಉಪನ್ಯಾಸಕ ಚಿದಾನಂದ ಸಾಮಾನ್ಯವಾಗಿ ಎಲ್ಲಾ ಕಾಲೇಜು ಗಳಲ್ಲಿ ಇಂತಹ ಕಾರ್ಯಕ್ರಮಗಳು ನಡೆಯುತ್ತವೆ. ಆದರೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸಾಂಪ್ರದಾ ಯಕವಾಗಿ ನಡೆದುಕೊಂಡು ಬಂದಿದೆ. ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಇದೊಂದು ಅವಿಸ್ಮರಣಿಯ ಕಾರ್ಯಕ್ರಮವಾಗಿದೆ ಎಂದರು. ಪಿಯುಸಿ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದೆ ಆ ದೃಷ್ಠಿಯಿಂದ ವಿದ್ಯಾರ್ಥಿಗಳು ಮುಂದೆ ಬರುವ ಪಿ.ಯು.ಸಿ. ಪರೀಕ್ಷೆಗೆ ಎಲ್ಲಾ ರೀತಿ ಸಿದ್ಧರಾಗಿ ಎಂದು ಶುಭ ಕೋರಿದರು. ನಂತರ ವಿದ್ಯಾರ್ಥಿಗಳು ಅವರ ವಿದ್ಯಾರ್ಥಿ ಜೀವನದ ಬಗ್ಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಸರಕಾರಿ ಪದವಿಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಎ.ಪಿ. ಧನಂಜಯ, ಪ್ರಾಂಶುಪಾಲ ಪಿ.ಆರ್. ವಿಜಯ ಹಾಗೂ ಸಮಾಜ ಸೇವಕಿ ಆಶಾ ತಿಮ್ಮಯ್ಯ ಹಾಗೂ ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿ ನಿತೀಶ್ ಸ್ವಾಗತಿಸಿದರು. ವರೀಷ್ಮ ಮತ್ತು ತಂಡದವರು ಪ್ರಾರ್ಥಿಸಿದರು.