ಕುಶಾಲನಗರ, ಫೆ. 20: ಕುಶಾಲನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮಾಹಿತಿ, ಮಾರ್ಗದರ್ಶನ ಘಟಕ ಮತ್ತು ಬೆಂಗಳೂರಿನ ಎಕ್ಸ್ ಲೀಡರ್ ಶಿಪ್ ಅಕಾಡೆಮಿಯ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ನಾಯಕತ್ವ ಬೆಳವಣಿಗೆ, ವ್ಯಕ್ತಿತ್ವ ವಿಕಾಸನ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವುದಕ್ಕೆ ಸಂಬಂಧಿಸಿದಂತೆ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಎಕ್ಸ್ ಲೀಡರ್‍ಶಿಪ್ ಅಕಾಡೆಮಿಯ ಮುಖ್ಯ ಕಾರ್ಯನಿರ್ವಹಣಾಕಾರಿ ಡಾ. ಎಸ್. ನಾಗರಾಜ್ ರಾವ್, ಡಾ. ಉಷಾ ಮಾಲಿನಿ ಮತ್ತು ಲಯನ್ ಸೋಮೇಶ್ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಉಪನ್ಯಾಸ, ಸಂವಾದದ ಮೂಲಕ ತರಬೇತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಪೆÇ್ರ. ಹೆಚ್.ಬಿ. ಲಿಂಗಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಲೇಜಿನಲ್ಲಿ ನಡೆಯುವ ಇಂತಹ ಕಾರ್ಯಕ್ರಮ ಗಳನ್ನು ಸದ್ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳು ತಮ್ಮ ಭವಿಷÀ್ಯವನ್ನು ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ವಸಂತಕುಮಾರಿ, ಐ.ಕ್ಯೂ.ಎ.ಸಿ. ಘಟಕದ ಸಂಚಾಲಕಿ ಡಾ. ಎಂ. ರಶ್ಮಿ, ಉದ್ಯೋಗ ಮಾಹಿತಿ ಸಂಚಾಲಕರಾದ ಟಿ.ಎಂ. ದೀಪ ಸೇರಿದಂತೆ ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಇದ್ದರು.