ಮಡಿಕೇರಿ, ಫೆ. 22: ಒಡಿಪಿ ಸಂಸ್ಥೆ ಮತ್ತು ನಬಾರ್ಡ್ ಅವರ ಸಂಯುಕ್ತ ಆಶ್ರಯದಲ್ಲಿ ಕೌಶಲ್ಯಾಧಾರಿತ ತರಬೇತಿಯ ಸಮಾರೋಪ ಸಮಾರಂಭವು ತಾ. 24 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸಂತ ಮೈಕಲರ ಪ್ರೌಢಶಾಲೆಯ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಮೈಸೂರಿನ ಒಡಿಪಿ ಸಂಸ್ಥೆಯ ನಿರ್ದೇಶಕ ಪಾಧರ್ ಅಲೆಕ್ಸ್ ಪ್ರಶಾಂತ್ ಸಿಕ್ವೇರಾ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ನಬಾರ್ಡ್ ಸಂಸ್ಥೆಯ ಜಿಲ್ಲಾ ಅಭಿವೃದ್ಧಿ ಅಧಿಕಾರಿ ಪಿ.ವಿ. ಶ್ರೀನಿವಾಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಟಿ.ಎಸ್. ಅರುಂಧತಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹೆಚ್.ಡಿ. ಪುಟ್ಟರಾಜು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ನಿಂಗರಾಜಪ್ಪ, ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ಅಧಿಕಾರಿ ದಯಾನಂದ, ಮೈಸೂರು ಒಡಿಪಿ ಸಂಸ್ಥೆಯ ಮಹಿಳಾ ಅಭಿವೃದ್ಧಿ ಯೋಜನಾ ಸಂಯೋಜಕರಾದ ಮೋಲಿ ಪುಡ್ತಾದೋ, ಯೋಜನಾ ಸಂಯೋಜಕಿ ಲಲಿತಾ ಜಾನ್, ವಲಯ ಸಂಯೋಜಕಿ ಜಾಯ್ಸ್ ಮೇನೇಜಸ್ ಇತರರು ಪಾಲ್ಗೊಳ್ಳಲಿದ್ದಾರೆ.