ಮಡಿಕೇರಿ, ಫೆ. 22: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ಕರ್ನಾಟಕ ಸರ್ಕಾರವು ಬರುವ ಮೇ ಮಾಹೆಯಲ್ಲಿ ನಡೆಸಲಿರುವ ಕೆಎಎಸ್ ಮತ್ತು ಎಫ್‍ಡಿಎ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.

ಆಸಕ್ತರು ತಾ. 29 ರೊಳಗೆ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯೊಳಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ 0821-2515944 ಈ ದೂ.ಸಂಖ್ಯೆ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವರಾದ ಪ್ರೊ. ಲಿಂಗರಾಜ ಗಾಂಧಿ ತಿಳಿಸಿದ್ದಾರೆ.