ಮಡಿಕೇರಿ, ಫೆ. 22: ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಇತ್ತೀಚೆಗೆ ಪೌರತ್ವ ಕಾಯ್ದೆ ವಿರುದ್ಧ ನಡೆದ ಕಾರ್ಯಕ್ರಮದಲ್ಲಿ ಯುವತಿಯೋರ್ವಳು ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದ್ದಳು. ಇದನ್ನು ಖಂಡಿಸಿ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ತಾ. 21ರಂದು ಹಿಂದೂ ಜಾಗರಣಾ ವೇದಿಕೆ ಹಾಗೂ ಭಜರಂಗದಳ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು.

ಜಾಗರಣಾ ವೇದಿಕೆಯ ನಗರ ಸಂಚಾಲಕ ಮಹೇಶ್, ಭಜರಂಗದಳ ಜಿಲ್ಲಾ ಸಂಚಾಲಕ ಚೇತನ್, ರಾಬಿನ್ ದೇವಯ್ಯ, ಮಹೇಶ್ ಜೈನಿ, ರಾಯ್ ತಮ್ಮಯ್ಯ, ಅನಿತಾ ಪೂವಯ್ಯ ಹಾಜರಿದ್ದರು.

ವೀರಾಜಪೇಟೆ: ಇಲ್ಲಿನ ವಿಶ್ವ ಹಿಂದೂ ಪರಿಷತ್, ಭಜರಂಗದಳ, ದುರ್ಗಾವಾಹಿನಿ ಹಾಗೂ ಇತರ ಹಿಂದೂಪರ ಸಂಘಟನೆಗಳು ಇಲ್ಲಿನ ಗಡಿಯಾರ ಕಂಬದ ಬಳಿ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ದುರ್ಗಾವಾಹಿನಿಯ ಅಂಬಿಕಾ ಉತ್ತಪ್ಪ, ವಿದ್ಯಾಮಲ್ಯ, ಡಿ.ನರಸಿಂಹ, ರತ್ನಾಕರ್, ಸುವಿನ್ ಗಣಪತಿ, ಕಿಲನ್ ಗಣಪತಿ, ಬಿ.ಎಂ.ಗಣೇಶ್, ಅನಿಲ್ ಮಂದಣ್ಣ, ಪಟ್ಟಣ ಪಂಚಾಯಿತಿ ಸದಸ್ಯರುಗಳು, ಇತರರು ಪಾಲ್ಗೊಂಡಿದ್ದರು.

ನಾಪೆÇೀಕ್ಲು : ಇಲ್ಲಿನ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಪಾಕ್ ಪರ ಘೋಷಣೆ ಕೂಗಿದ ಯುವತಿಯ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಜಿಲ್ಲಾ ಪಂಚಾಯತ್ ಸದಸ್ಯ ಪಾಡಿಯಮ್ಮಂಡ ಮುರುಳೀಧರ್ ಕರುಂಬಮ್ಮಯ್ಯ, ರಾಜ್ಯ ಬಿ.ಜೆ.ಪಿ.ಯ ಪ್ರಧಾನ ಕಾರ್ಯದರ್ಶಿ ಮನು ಮುತ್ತಪ್ಪ, ಆರ್.ಎಂ.ಸಿ. ಅಧ್ಯಕ್ಷ ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ, ನಾಪೆÇೀಕ್ಲು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಕಾಳೇಯಂಡ ಸಾಬ ತಿಮ್ಮಯ್ಯ, ಗ್ರಾಮ ಪಂಚಾಯತ್ ಸದಸ್ಯ ಮಾಚೇಟ್ಟೀರ ಕುಶು ಕುಶಾಲಪ್ಪ, ಶಿವಚಾಳಿಯಂಡ ಜಗದೀಶ್, ಧವಸ ಭಂಡಾರದ ಅಧ್ಯಕ್ಷ ಕಂಗಾಂಡ ಜಾಲಿ ಪೂವಪ್ಪ ಇನ್ನಿತರರು ಇದ್ದರು.