ಮಡಿಕೇರಿ, ಫೆ. 22: ಕೋಲಾರ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಕೋಲಾರ ಪಬ್ಲಿಕ್ ಎಜುಕೇಶನ್ ಇನ್‍ಸ್ಟಿಟ್ಯೂಟ್‍ನಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಗೋಣಿಕೊಪ್ಪ ಸಮೀಪದ ಕಳತ್ಮಾಡು ಲಯನ್ಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ದಿಶಾ ತಂಗಮ್ಮ ಪ್ರೌಢಶಾಲಾ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾಳೆ. ಈಕೆ ಕೈಕೇರಿ ಗ್ರಾಮದ ಸಣ್ಣುವಂಡ ಲೋಕೇಶ್ ನಂಜಪ್ಪ ಹಾಗೂ ಸ್ವಪ್ನ ಅವರ ಪುತ್ರಿ.