ಕೂಡಿಗೆ, ಫೆ. 22: ಶಿರಂಗಾಲ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ವಿತರಣೆ ಹಾಗೂ ಬೀಳ್ಕೊಡುಗೆ ಸಮಾರಂಭ ನಡೆಯಿತು. ವಿದ್ಯಾರ್ಥಿಗಳು ಪರೀಕ್ಷೆಯ ಸಮಯದಲ್ಲಿ ಮಿತ ಆಹಾರವನ್ನು ಬಳಸುವುದರ ಮೂಲಕ ಹೆಚ್ಚು ಶ್ರಮವಹಿಸಿ ಓದಿನ ಕಡೆ ಗಮನ ಹರಿಸಬೇಕು ಎಂದು ಹಂಡ್ರಂಗಿ ನಾಗರಾಜ್ ವಿದ್ಯಾರ್ಥಿಗಳಿಗೆ ಸೂಚನೆ ನೀಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲೆ ಎ.ಎಸ್. ಶ್ರೀಲತಾ, ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಶಿಸ್ತಿನಿಂದ ಇರಬೇಕು ಎಂದರು. ಕಾರ್ಯಕ್ರಮದಲ್ಲಿ ಉಪನ್ಯಾಸಕ ವರ್ಗ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.