ಮಡಿಕೇರಿ, ಫೆ. 22: ಓಡಿಪಿ ಸಂಸ್ಥೆ ಮತ್ತು ನಬಾರ್ಡ್ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕೌಶಲ್ಯ ಆಧಾರಿತ ತರಬೇತಿಯ ಸಮಾರೋಪ ಸಮಾರಂಭ ತಾ. 24 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸಂತ ಮೈಕಲರ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ನಡೆಯಲಿದೆ.

ಅಧ್ಯಕ್ಷತೆಯನ್ನು ಓಡಿಪಿ ಸಂಸ್ಥೆಯ ನಿರ್ದೇಶಕ ಅಲೆಕ್ಸ್ ಪ್ರಶಾಂತ್ ಸಿಕ್ವೇರಾ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ನಬಾರ್ಡ್ ಸಂಸ್ಥೆಯ ಜಿಲ್ಲಾ ಅಭಿವೃದ್ಧಿ ಅಧಿಕಾರಿ ಪಿ.ವಿ. ಶ್ರೀನಿವಾಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಟಿ.ಎಸ್. ಅರುಂಧತಿ ಪಾಲ್ಗೊಳ್ಳಲಿದ್ದಾರೆ.