ಮಡಿಕೇರಿ, ಫೆ. 22: ಅಬಕಾರಿ ಉಪ ನಿರೀಕ್ಷಕರ 59 ಹುದ್ದೆಗೆ ಕರ್ನಾಟಕ ಲೋಕಸೇವಾ ಆಯೋಗವು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಅಭ್ಯರ್ಥಿಗಳು ಗಳಿಸಿದ ಅಂಕಗಳ ಜೇಷ್ಠತೆ ಮತ್ತು ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ 1:5 ರ ಅನುಪಾತದಲ್ಲಿ ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ 1 ಪುರುಷ ಮತ್ತು 1 ಮಹಿಳಾ ಒಟ್ಟು 2 ಅರ್ಹ ಅಭ್ಯರ್ಥಿಗಳಿಗೆ ದೇಹಾಢ್ರ್ಯತೆ ಮತ್ತು ದೈಹಿಕ ಸಾಮಥ್ರ್ಯ ಪರೀಕ್ಷೆಯು ತಾ. 27 ರಂದು ಬೆಳಿಗ್ಗೆ 8 ಗಂಟೆಗೆ ನಗರದ ಜನರಲ್ ಕೆ.ಎಸ್. ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ದೈಹಿಕ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವುದು ಹಾಗೂ ವೀಡಿಯೋ ಚಿತ್ರೀಕರಣ ಮಾಡಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ. ಸ್ನೇಹ ಸಿ.ವಿ. ಸೂಚಿಸಿದರು.

ಸಭೆಯಲ್ಲಿ ಸದಸ್ಯ ಕಾರ್ಯದರ್ಶಿ ಮತ್ತು ಅಬಕಾರಿ ಉಪ ಆಯುಕ್ತ ಪಿ. ಬಿಂದುಶ್ರೀ, ಸದಸ್ಯರು ಮತ್ತು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ಕಾರ್ಯಪ್ಪ ಹಾಗೂ ಅಬಕಾರಿ ಇಲಾಖೆ ಮತ್ತು ಜಿಲ್ಲಾ ಯುವಜನ ಕ್ರೀಡಾ ಇಲಾಖೆಯ ಸಹಾಯಕ ಸಿಬ್ಬಂದಿಗಳು ಹಾಜರಿದ್ದರು.