ಸೋಮವಾರಪೇಟೆ, ಫೆ. 22: ಜೇಸಿ ವತಿಯಿಂದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯಲ್ಲಿ ಮಕ್ಕಳಿಗೆ ಪರೀಕ್ಷೆಯನ್ನು ಎದುರಿಸುವ ಬಗೆಗಿನ ಕಾರ್ಯಾಗಾರ ನಡೆಯಿತು.

ಜೇಸಿ ಅಧ್ಯಕ್ಷೆ ಉಷಾರಾಣಿ ಗುರುಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜೇಸಿ ಮಹಿಳಾ ಘಟಕದ ಅಧ್ಯಕ್ಷೆ ವಿದ್ಯಾ ಸೋಮೇಶ್, ಶಾಲಾ ಮುಖ್ಯ ಶಿಕ್ಷಕಿ ಮಿಲ್‍ಡ್ರೆಡ್ ಗೊನ್ಸಾಲ್ವೆಸ್, ಕಾರ್ಯದರ್ಶಿ ಮಂಜುಳಾ ಸುಬ್ರಮಣಿ, ತರಬೇತಿ ವಿಭಾಗದ ಉಪಾಧ್ಯಕ್ಷೆ ಮೀನಾ ಮಂಜುನಾಥ್, ಮಹಿಳಾ ಘಟಕದ ಕಾರ್ಯದರ್ಶಿ ಉಷಾ ಇದ್ದರು.

ಜೇಸೀ ಸಂಸ್ಥೆಯ ರಾಷ್ಟ್ರೀಯ ತರಬೇತುದಾರ ವಿಜಯಕುಮಾರ್ ಅವರು, ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಸುಲಭ ಉಪಾಯಗಳ ಬಗ್ಗೆ ಮಾಹಿತಿ ನೀಡಿದರು.