ಮಡಿಕೇರಿ, ಫೆ. 22: ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಾಜ್ಯಶಾಸ್ತ್ರ ವಿಭಾಗ ಹಾಗೂ ಕೊಡಗು ಪ್ರೆಸ್‍ಕ್ಲಬ್ ಇವರ ಸಹಯೋಗದಲ್ಲಿ ರಾಜ್ಯಶಾಸ್ತ್ರ ಬೆಳಕು ಭಿತ್ತಿಪತ್ರಿಕೆಯ 7ನೇ ವರ್ಷದ ವಾರ್ಷಿಕೋತ್ಸವ ಹಾಗೂ ರಾಜ್ಯ ಮಟ್ಟದ ವಿಚಾರಗೋಷ್ಠಿ ಕಾರ್ಯಕ್ರಮವು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಶಿವಮೊಗ್ಗ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ರವಿ ಟೆಲೆಕ್ಸ್ ಅವರು ರಾಜ್ಯಶಾಸ್ತ್ರದ ಬೆಳಕು ಭಿತ್ತಿಪತ್ರವನ್ನು ಬಿಡುಗಡೆಗೊಳಿಸಿ, ಮಾಧ್ಯಮ ಮತ್ತು ರಾಜಕೀಯ ವ್ಯವಸ್ಥೆ ಹೋಲಿಕೆಯ ವಿವಿಧ ಆಯಾಮಗಳು ಎಂಬ ವಿಷಯದ ಬಗ್ಗೆ ಮಾತನಾಡಿದರು.
ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಟಿ.ಕೆ. ಬೋಪಯ್ಯ, ಶಿರ್ವ ಸೇಂಟ್ ಮೇರಿಸ್ ಕಾಲೇಜಿನ ಸಹ ಪ್ರಾಧ್ಯಾಪಕ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ರಾಜ್ಯಶಾಸ್ತ್ರ ಅಧ್ಯಾಪಕರ ಸಂಘದ ಅಧ್ಯಕ್ಷ ಪೆÇ್ರ. ಜಿ.ಎಂ. ಥೋಮಸ್, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಪೆÇ್ರ. ದಿವ್ಯ ಎಂ.ಬಿ, ಉಪನ್ಯಾಸಕಿ ಡೀನಾ ಪಿ.ಪಿ, ಕವನ ಕೆ.ಎಲ್ ಮತ್ತು ವಿವಿಧ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಮತ್ತು ಇತರರು ಪಾಲ್ಗೊಂಡಿದ್ದರು.