ಭಾಗಮಂಡಲ, ಫೆ. 23: ಭಾಗಮಂಡಲ ಮತ್ತು ಅಯ್ಯಂಗೇರಿ ಗ್ರಾಮ ಪಂಚಾಯಿತಿಯ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಕೆ.ಜಿ.ಬೋಪಯ್ಯ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು ಹಿಂದಿನ ಸಮ್ಮಿಶ್ರ ಸರಕಾರ ಇದ್ದಾಗ ಜಿಲ್ಲೆಗೆ ಅನುದಾನದ ಕೊರತೆಯಿಂದ ಅಭಿವೃದ್ದಿ ಕಾರ್ಯಗಳು ಕುಂಠಿತವಾಗಿದ್ದು; ಇದೀಗ ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ ಆಡಳಿತ ಇರುವುದರಿಂದ ಮುಂದಿನ ದಿನಗಳಲ್ಲಿ ಇನ್ನಷ್ಟು ಅನುದಾನ ಬರಲಿದ್ದು ಈ ಭಾಗದ ಅಬಿವೃದ್ಧಿಗೆ ನೀಡಲಾಗುವುದು ಎಂದರು. ಭಾಗಮಂಡಲ-ಕೋರಂಗಾಲ ಗ್ರಾಮದಲ್ಲಿ 15 ಕೋಟಿ ರೂ.ವೆಚ್ಚದಲ್ಲಿ ವಾಜಪೇಯಿ ವಸತಿ ಶಾಲೆಯ ಕಟ್ಟಡದ ಕಾಮಗಾರಿ ಮುಕ್ತಾಯದ ಹಂತದಲ್ಲಿದ್ದು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಇಲ್ಲಿ ಶಾಲೆ ಆರಂಭವಾಗಲಿದೆ, ಅಂತೆಯೇ ಮೇಲ್ಸೇತುವೆ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಕವಿತಾ ಪ್ರಭಾಕರ್, ಭಾಗಮಮಡಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮಿತ್ರಾ, ಉಪಾಧ್ಯಕ್ಷೆ ಭವಾನಿ, ಅಯ್ಯಂಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ, ಸದಸ್ಯರಾದ ಮನೋಜ್, ಸಂತೋಷ್, ಪುರುಷೋತ್ತಮ, ರಾಜುರೈ, ಸ್ಥಾನೀಯ ಸಮಿತಿ ಅಧ್ಯಕ್ಷ ರಾಜೀವ್, ಯುವಮೊರ್ಚಾ ಅಧ್ಯಕ್ಷ ಕಾಳನ ರವಿ, ಪಕ್ಷದ ಹಿರಿಯರಾದ ಕುದುಪಜೆ ಪಳಂಗಪ್ಪ , ಟಿ.ಎಸ್. ನಾರಾಯಣಾಚಾರ್, ದಂಡೀರ ಜಯಂತ್, ಕುದುಕುಳಿ ಭರತ್ ಇನ್ನಿತರರು ಉಪಸ್ಥಿತರಿದ್ದರು.