ಗೋಣಿಕೊಪ್ಪ ವರದಿ, ಫೆ.23 : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಜಿಲ್ಲೆಯಾದ್ಯಂತ ಯುವ ಸಮೂಹಕ್ಕೆ ಸಾಹಿತ್ಯ, ಕಲೆ ಹಾಗೂ ಸಂಸ್ಕೃತಿ ನಾಟಕದ ಬಗ್ಗೆ ಚಟುವಟಿಕೆಗಳಿಂದ ಕೂಡಿದ ಕಾರ್ಯಕ್ರಮಗಳಿಗೆ ಒತ್ತು ನೀಡಿ ಭಾಷೆಯ ಬೆಳವಣಿಗೆ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದು ಸಾಹಿತಿ ಡಾ. ಹೆಬ್ಬಾಲೆ ಕೆ ನಾಗೇಶ್ ಅಭಿಪ್ರಾಯಪಟ್ಟರು.ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ತೂಕ್ ಬೊಳಕ್ ಕಲೆ ಕ್ರೀಡೆ ಮತ್ತು ಸಾಹಿತ್ಯ ಅಕಾಡೆಮಿ, ಕೊಡವ ತಕ್ಕ ಎಳ್ತ ಕಾರಡ ಕೂಟ ಹಾಗೂ ಫೆಡರೇಶನ್ ಆಫ್ ಕೊಡವ ಸಮಾಜ ಬಾಳ್ಗೋಡ್ ಜಂಟಿ ಆಶ್ರಯದಲ್ಲಿ ಫೆಡರೇಷನ್ ಆಫ್ ಕೊಡವ ಸಮಾಜದಲ್ಲಿ ನಡೆದ ಕೊಡವ-ಕನ್ನಡ ಸಾಹಿತ್ಯ ಕಮ್ಮಟದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು ಯುವ ಸಮೂಹಕ್ಕೆ ಭಾಷೆ ಹಾಗೂ ಸಂಸ್ಕøತಿಯ ಪರಿಚಯ ಮಾಡುವುದು ಭಾಷೆಯ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಹೇಳಿದರು.ಫೆಡರೇಷನ್ ಆಫ್ ಕೊಡವ ಸಮಾಜದ ಕಾರ್ಯದರ್ಶಿ ವಾಟೇರಿರ ಶಂಕರಿ ಪೂವಯ್ಯ ಮಾತನಾಡಿ ಭಾಷೆ ಬೆಳೆಸಲು ಮಕ್ಕಳಿಗೆ ಮಾತೃಭಾಷೆಯನ್ನು ಕಲಿಸಬೇಕು ಭಾಷೆ ಬೆಳೆದರೆ ಸಾಹಿತ್ಯ ತಾನಾಗಿಯೇ ಬೆಳೆಯಲಿದೆ. ಕೊಡವ ಕಲೆ, ಸಂಸ್ಕೃತಿ ಹಾಗೂ ಸಾಹಿತ್ಯವನ್ನು ಬೆಳೆಸುವ ಕಾರ್ಯಾಗಾರಗಳಿಗೆ ಫೆಡರೇಷನ್ ಆಫ್ ಕೊಡವ ಸಮಾಜ ಉಚಿತವಾಗಿ ಸ್ಥಳಾವಕಾಶ ಕಲ್ಪಿಸಲಿದೆ ಎಂದು ಹೇಳಿದರು ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಡಾ.ಅಮ್ಮಾಟಂಡ ಪಾರ್ವತಿ ಅಪ್ಪಯ್ಯ, ಸದಸ್ಯರಾದ ಡಾ ಮುಲ್ಲೇಂಗಡ ರೇವತಿ ಪೂವಯ್ಯ, ಪಡಿಞರಂಡ ಪ್ರಭುಕುಮಾರ್, ಕುಡಿಯರ ಮುತ್ತಪ್ಪ, ಮಾಚಿಮಾಡ ಜಾನಕಿ, ಶಂಬಯ್ಯ, ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷೆ ಐಮುಡಿಯಂಡ ರಾಣಿ ಮಾಚಯ್ಯ ಇದ್ದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ನಾಗೇಶ್ ಕಾಲೂರ್, ರಮೇಶ್ ಗುಬ್ಬಿ ಪಾಲ್ಗೊಂಡರು.