ಕೂಡಿಗೆ, ಫೆ. 23: ಜಿಲ್ಲಾ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ವತಿಯಿಂದ ಮಡಿಕೇರಿಯ ಕಿರಿಯರ ಕ್ರೀಡಾ ವಸತಿ ನಿಲಯಕ್ಕೆ ಸೋಮವಾರಪೇಟೆ ತಾಲೂಕು ಮಟ್ಟದ ಆಯ್ಕೆ ಪ್ರಕ್ರಿಯೆ ಕೂಡಿಗೆ ಕ್ರೀಡಾ ಶಾಲಾ ಮೈದಾನದಲ್ಲಿ ನಡೆಯಿತು.
ಅಥ್ಲೆಟಿಕ್ ಮತ್ತು ಹಾಕಿ ವಿಭಾಗಕ್ಕೆ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಮುಂದಿನ ಸಾಲಿಗೆ 5ನೇ ತರಗತಿಗೆ ಪ್ರವೇಶ ಪಡೆಯಲು ಆಯ್ಕೆಗೊಳ್ಳುವ ಪ್ರಕ್ರಿಯೆ ನಡೆಯಿತು. ತರಬೇತುದಾರ ಅಂತೋಣಿ ಡಿಸೋಜ, ಮಂಜುನಾಥ್, ಪ್ರಕಾಶ್ ಬಿಂದು ಸೇರಿದಂತೆ ಇಲಾಖೆಯ ಅಧಿಕಾರಿ ವರ್ಗ ಹಾಗೂ ಸಿಬ್ಬಂದಿ ಹಾಜರಿದ್ದರು. ಸೋಮವಾರಪೇಟೆ ತಾಲೂಕಿನ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.