ವೀರಾಜಪೇಟೆ, ಫೆ. 23: ಬೆಂಗಳೂರಿನ ವಾಸವಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಅಂತರರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ‘ಕನ್ನಡ ಭಾಷಾ ಸಂವರ್ಧನೆಯ ಸವಾಲುಗಳು’ ಎಂಬ ವಿಷಯದಲ್ಲಿ ವೀರಾಜ ಪೇಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಡಾ. ಡಿ.ಕೆ. ಉಷಾ ಅವರ ಪ್ರಬಂಧ ಮಂಡನೆ ಅತ್ಯುತ್ತಮ ಪ್ರಬಂಧ ಮಂಡನೆ ಎಂದು ಪರಿಗಣಿತಗೊಂಡು ಪ್ರಶಸ್ತಿ ಪಡೆದುಕೊಂಡಿದ್ದಾರೆ.