ವೀರಾಜಪೇಟೆ, ಫೆ. 23: ವೀರಾಜಪೇಟೆಯ ಸಂತ ಅನ್ನಮ್ಮ ಪದವಿ ಕಾಲೇಜಿನ ಬಿ.ಸಿ.ಎ. ವಿಭಾಗದ ವತಿಯಿಂದ ಗೋಣಿಕೊಪ್ಪ ಸಮೀಪದ ಅತ್ತೂರು ಸರಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಕಲಿಕಾ ಕಾರ್ಯಕ್ರಮ ಕಂಪ್ಯೂಟರ್ ಪ್ರಯೋಗಾಲಯದಲ್ಲಿ ನಡೆಸಲಾಯಿತು.
35 ವಿದ್ಯಾರ್ಥಿಗಳಿಗೆ ಸಂತ ಅನ್ನಮ್ಮ ಪದವಿ ಕಾಲೇಜಿನ ಉಪನ್ಯಾಸಕರು ಮತ್ತು ಬಿ.ಸಿ.ಎ ವಿದ್ಯಾರ್ಥಿಗಳು ಮಾಹಿತಿಯೊಂದಿಗೆ ಕಂಪ್ಯೂಟರ್ ಶಿಕ್ಷಣ ನೀಡಿದರು.
ಕಂಪ್ಯೂಟರ್ನ ಸಾಮಾನ್ಯ ಜ್ಞಾನವನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಯಿತು. ಹಾಗೂ ಪಿ.ಪಿ.ಟಿ. ಮುಖಾಂತರ ವಿವರಿಸಲಾಯಿತು. ಈ ಸಂದರ್ಭ ಬಿ.ಸಿ.ಎ. ವಿಭಾಗದ ಮುಖ್ಯಸ್ಥೆ ಸೌಮ್ಯ ಸೋಮರಾಜ್, ಶಿಕ್ಷಕರಾದ ಶಮ್ಮಿ ಎ.ಜೆ. ಸಲೀನಾ ಎಂ.ಎಂ. ಮತ್ತು ಇತರ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಕಂಪ್ಯೂಟರ್ನ ಜ್ಞಾನವನ್ನು ಅರಿತರು.