ಮಡಿಕೇರಿ, ಫೆ. 23: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆ.ಪಿ. ಬಾಣೆ ಕುಂಜಿಲದಲ್ಲಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಸರಕಾರದಿಂದ ಬಿಡುಗಡೆಯಾದ ಅನುದಾನದಲ್ಲಿ ಉಚಿತವಾಗಿ ಶೂ ಹಾಗೂ ಎರಡು ಜೊತೆ ಸಾಕ್ಸ್‍ಗಳನ್ನು ಕಕ್ಕಬೆ ಗ್ರಾಮ ಪಂಚಾಯಿತಿ ಸದಸ್ಯ ಮೂಸಾ ಅವರು ವಿತರಿಸಿದರು.

ಈ ಸಂದರ್ಭ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಎಂ.ಎಂ. ಅಜೀಜ್, ಎಸ್.ಡಿ.ಎಂ.ಸಿ. ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.