ಸೋಮವಾರಪೇಟೆ, ಫೆ.24: ಅರೆಭಾಷೆ ಅಧ್ಯಯನ ಪೀಠದ ಸ್ಥಾಪನೆಗೆ ಇತರ ಜನಪ್ರತಿನಿದಿ üಗಳೊಂದಿಗೆ ತಾನೂ ಕೂಡ ಪ್ರಯತ್ನ ನಡೆಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಭರವಸೆ ನೀಡಿದರು.

ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ, ಆಲೂರು ಸಿದ್ದಾಪುರದ ಅರೆಭಾಷೆ ಗೌಡ ಸಮಾಜ, ಅರೆಭಾಷೆ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಆಶ್ರಯದಲ್ಲಿ ತಾಲೂಕಿನ ಆಲೂರುಸಿದ್ದಾಪುರ ಸಮೀಪದ ಸಂಗಯ್ಯನಪುರದಲ್ಲಿ ಆಯೋಜಿಸಿದ್ದ 2ನೇ ಅರೆಭಾಷೆ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಅರೆಭಾಷೆ ಅಧ್ಯಯನ ಪೀಠದ ಸ್ಥಾಪನೆಯಿಂದ ಭಾಷೆ ಸಂಸ್ಕøತಿಯ ಏಳಿಗೆ ಸಾಧ್ಯ. ಈ ನಿಟ್ಟಿನಲ್ಲಿ ಕೇಂದ್ರ ಸಚಿವ ಸದಾನಂದಗೌಡ, ಶಾಸಕರು ಗಳಾದ ಕೆ.ಜಿ. ಬೋಪಯ್ಯ, ಅಪ್ಪಚ್ಚು ರಂಜನ್ ಅವರೊಂದಿಗೆ ತಾನೂ ಕೂಡ ಪ್ರಯತ್ನ ನಡೆಸುತ್ತೇನೆ ಎಂದರು.

ತಾ.ಪಂ. ಉಪಾಧ್ಯಕ್ಷ ಅಭಿಮನ್ಯುಕುಮಾರ್ ಮಾತನಾಡಿ, ಜನಾಂಗಗಳ ನಡುವೆ ಸಂಘರ್ಷಗಳು ಇರಬಾರದು. ಪ್ರತಿ ಭಾಷಿಕರಿಗೂ ಸಂಸ್ಕøತಿಯಿದ್ದು, ಅದನ್ನು ಉಳಿಸಿ, ಬೆಳೆಸಬೇಕು ಎಂದು ಅಭಿಪ್ರಾಯಿಸಿ ದರು.ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ ಮಾತನಾಡಿ, ಅಕಾಡೆಮಿ ಯ ಮುಂದಿನ ಕಾರ್ಯಕ್ರಮಗಳಿಗೆ ಕೊಡಗು ಗೌಡ ಸಮಾಜಗಳ ಒಕ್ಕೂಟ ಸಂಪೂರ್ಣ ಸಹಕಾರ ನೀಡಲಿದೆ ಎಂದರು.

ಸಮ್ಮೇಳನಾಧ್ಯಕ್ಷರಾದ ಭವಾನಿ ಶಂಕರ ಅವರು ಸಮಾರೋಪ ಭಾಷಣ ಮಾಡಿದರು. ವೇದಿಕೆಯಲ್ಲಿ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಮೈಸೂರು ವಿಶ್ವ ವಿದ್ಯಾಲಯದ ವಿಶ್ರಾಂತ ಕುಲಪತಿ ಕೊಳಂಬೆ ಚಿದಾನಂದ ಗೌಡ, ಆಲೂರು ಸಿದ್ದಾಪುರ ಗ್ರಾ.ಪಂ. ಮಾಜೀ ಅಧ್ಯಕ್ಷ ಕೋಳಿಬೈಲು ಬೋಜಪ್ಪ ಅವರುಗಳು ಉಪಸ್ಥಿತರಿದ್ದರು.

ಸಾಧಕರಿಗೆ ಸನ್ಮಾನ: ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರುಗಳಾದ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಪಿ.ಜಿ. ಅಂಬೇಕಲ್, ಪತ್ರಿಕೋದ್ಯಮದ ಸಾಧನೆಗಾಗಿ ಹರಿಪ್ರಸಾದ್ ಅಡ್ಪಂಗಾಯ, ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ನಂಗಾರು ನಿಂಗರಾಜು, ವಿಜ್ಞಾನ ಕ್ಷೇತ್ರದಿಂದ ಅಮ್ಮಾಜೀರ ಹರ್ಷಿತ್, ಕೃಷಿ ಕ್ಷೇತ್ರದ ಸಾಧನೆಗಾಗಿ ಅಜಿರಂಗಲ ರಾಮಣ್ಣ, ಸಾಮಾಜಿಕ ಕ್ಷೇತ್ರದ ಸಾಧನೆಗಾಗಿ ಅತ್ಯಾಡಿ ಎಂ. ಪೂವಯ್ಯ, ಶಿಕ್ಷಣ ಕ್ಷೇತ್ರದಿಂದ ಹೊಸೂರು ಶಿವಪ್ರಕಾಶ್, ಕ್ರೀಡಾಕ್ಷೇತ್ರದ ಸಾಧನೆಗಾಗಿ ನವನೀತ ಪಟ್ಟೆಮನೆ ಅವರುಗಳನ್ನು ಸನ್ಮಾನಿಸಲಾಯಿತು.

ಇದರೊಂದಿಗೆ ಸಮ್ಮೇಳನದ ಅಧ್ಯಕ್ಷರಾದ ಹೊದ್ದೆಟ್ಟಿ ಭವಾನಿಶಂಕರ, ಆಲೂರು ಸಿದ್ದಾಪುರ ಗೌಡ ಸಮಾಜದ ಅಧ್ಯಕ್ಷ ದೇವಾಯಿರ ಗಿರೀಶ್, ಪ್ರಧಾನ ಕಾರ್ಯದರ್ಶಿ ಕುಯ್ಯಮುಡಿ ಜಯಕುಮಾರ್ ಅವರುಗಳನ್ನು ಅಕಾಡೆಮಿಯ ವತಿಯಿಂದ ಸನ್ಮಾನಿಸಲಾಯಿತು.

ನಂತರ ಕಾವೇರಿ ನಾಡ್ ಕಲಾವಿದರ ತಂಡದಿಂದ ‘ನಾಡ್‍ನ ಸಂಸ್ಕøತಿ ಹಿರಿಮೆ’ ಎಂಬ ನಾಟ್ಯ ರೂಪಕ ಹಾಗೂ ಆಲೂರು ಸಿದ್ದಾಪುರದ ಅರೆಭಾಷೆ ಗೌಡ ಸಮಾಜದ ವತಿಯಿಂದ ಅರೆಭಾಷೆ ಸಾಂಸ್ಕøತಿಕ ವೈವಿಧ್ಯ ಕಾರ್ಯಕ್ರಮಗಳು ನಡೆದವು.