ಮಡಿಕೇರಿ, ಫೆ. 24: ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ, ಬೆಂಗಳೂರು ಮತ್ತು ಮೈಸೂರು ಶಾಖೆ, ಕೊಡಗು ಜಿಲ್ಲಾ ಕೈಗಾರಿಕಾ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಕೈಗಾರಿಕೋದ್ಯಮಿಗಳು, ವಾಣಿಜ್ಯೋದ್ಯಮಿಗಳು ಹಾಗೂ ಭಾವಿ ರಫ್ತುದಾರರಿಗಾಗಿ ರಫ್ತು ಜಾಗೃತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡದ ಸಭಾಂಗಣದಲ್ಲಿ ನಡೆಯಲಿದೆ.

*ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಕೋಟ್ಪಾ ಕಾಯ್ದೆ ಉಲ್ಲಂಘನೆಯಾದ ಸ್ಥಳಗಳಲ್ಲಿ (ಪಾನ್ ಶಾಪ್, ಹೊಟೇಲ್, ರೆಸ್ಟೋರೆಂಟ್, ಸಾರ್ವಜನಿಕ ಸ್ಥಳಗಳು) ಶಾಲಾ ವಿದ್ಯಾರ್ಥಿಗಳು ಗುಲಾಬಿ ಹೂ ನೀಡುವುದರ ಮೂಲಕ ಕಾಯ್ದೆಯ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಬೆಳಿಗ್ಗೆ 10.30 ಗಂಟೆಗೆ ನಗರದ ಬಾಲಭವನದಲ್ಲಿ ನಡೆಯಲಿದೆ.