ಗೋಣಿಕೊಪ್ಪ ವರದಿ, ಫೆ. 25: ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ವಿಸ್ತರಣಾ ಶಿಕ್ಷಣ ಘಟಕ ವತಿಯಿಂದ ಒಂದು ದಿನದ ಜೇನು ಕೃಷಿ ತರಬೇತಿ ಕಾರ್ಯಾಗಾರವನ್ನು ತಾ. 26 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದೆ. ಜೇನುಕೃಷಿ ಬಗ್ಗೆ ಪ್ರಾಥಮಿಕ ಮಾಹಿತಿ ಹಾಗೂ ನಿರ್ವಹಣೆ ಕುರಿತ ಪ್ರಾತ್ಯಕ್ಷಿಕೆ ಕಾರ್ಯಕ್ರಮವಿದೆ. ಆಸಕ್ತರು 08272-225539, 9880076381 ದೂರವಾಣಿಯನ್ನು ಸಂಪರ್ಕಿಸಬಹುದಾಗಿದೆ ಎಂದು ವಿಸ್ತರಣಾ ಶಿಕ್ಷಣ ಘಟಕ ಮುಖ್ಯಸ್ಥ ಡಾ. ಆರ್.ಎನ್. ಕೆಂಚರೆಡ್ಡಿ ತಿಳಿಸಿದ್ದಾರೆ.