ಕೂಡಿಗೆ, ಫೆ. 25: ಐಗೂರು ಗ್ರಾ.ಪಂ.ಯ 2019-20ನೇ ಸಾಲಿನ ಎರಡನೇ ಹಂತದ ಗ್ರಾಮಸಭೆಯು ತಾ. 27 ರಂದು ಗ್ರಾ.ಪಂ. ಅಧ್ಯಕ್ಷ ಡಿ.ಎಂ. ರಮೇಶ್ ಅವರ ಅಧ್ಯಕ್ಷತೆ ಯಲ್ಲಿ ಯಡವನಾಡು ಸಮುದಾಯ ಭವನದಲ್ಲಿ ನಡೆಯಲಿದೆ. ನೋಡಲ್ ಅಧಿಕಾರಿಯಾಗಿ ಶಿಕ್ಷಣ ಇಲಾಖೆಯ ಶಶಿಧರ್, ಜಿ.ಪಂ. ಸದಸ್ಯರು, ತಾ.ಪಂ. ಸದಸ್ಯರು ಆಗಮಿಸಲಿದ್ದಾರೆ ಎಂದು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಯಾದವ್ ತಿಳಿಸಿದ್ದಾರೆ