ಸೋಮವಾರಪೇಟೆ,ಫೆ.25: ಕರ್ನಾಟಕ ರಾಜ್ಯ ಹಿರಿಯ ನಾಗರಿಕರ ಸಂಘದ ವತಿಯಿಂದ ಬೆಳಗಾವಿಯಲ್ಲಿ ನಡೆದ 5ನೇ ವರ್ಷದ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಕೊಡಗು ಜಿಲ್ಲಾ ಹಿರಿಯ ನಾಗರಿಕ ವೇದಿಕೆಯ ಅಧ್ಯಕ್ಷÀ ಎಂ.ಟಿ. ದಾಮೋಧರ್ ಹಾಗೂ ಉಪಾಧ್ಯಕ್ಷ ಎಸ್.ಪಿ. ಪ್ರಸನ್ನರವರ ಸೇವೆಯನ್ನು ಪರಿಗಣಿಸಿ ಸನ್ಮಾನಿಸಲಾಯಿತು.

ಬೆಳಗಾವಿಯ ಕಾರಂಜಿಮಠದ ಶ್ರೀ ಗುರುಸಿದ್ಧ ಸ್ವಾಮೀಜಿ ಹಾಗೂ ನಾಗನೂರು ರುದ್ರಾಕ್ಷಿ ಮಠದ ಶ್ರೀ ಡಾ. ಅಲ್ಲಮಪ್ರಭು ಅವರು ದಿವ್ಯ ಸಾನ್ನಿಧ್ಯ ವಹಿಸಿದ್ದರು. ಅಧ್ಯಕ್ಷತೆಯನ್ನು ರಾಜ್ಯಾಧ್ಯಕ್ಷ ಅಡಿವೆಪ್ಪ ಬೆಂಡಿಗೇರಿ ವಹಿಸಿದ್ದರು.

ವೇದಿಕೆಯಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ, ಸಮ್ಮೇಳನ ಸಮಿತಿ ಅಧ್ಯಕ್ಷ ಎಸ್.ಜಿ. ಸಿದ್ನಾಳ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ, ಮಾಜಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.