ಮಡಿಕೇರಿ, ಫೆ.25: ಕೊಡಗು ಜಿಲ್ಲಾ ಕಾವೇರಿ ತಮಿಳು ಸಂಘದ ವತಿಯಿಂದ ಚೆಟ್ಟಳ್ಳಿ ಪ್ರೌಢಶಾಲಾ ಮೈದಾನದಲ್ಲಿ ನಡೆದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸಮಾರಂಭದಲ್ಲಿ ರಾಜ್ಯ ಮಟ್ಟದಲ್ಲಿ ನೃತ್ಯ ಕ್ಷೇತ್ರದಲ್ಲಿನ ಸಾಧನೆಗಾಗಿ ನೃತ್ಯ ಪಟು ದಿಯಾ ದರ್ಶಿನಿಯನ್ನು ಸನ್ಮಾನಿಸಿ ಗೌರವಿಸಲಾಯಿತು. ಈಕೆ ಮಡಿಕೇರಿಯ ಕಿಂಗ್ಸ್ ಆಫ್ ಕೂರ್ಗ್ ಡ್ಯಾನ್ಸ್ ಇನ್ಸ್ಟಿಟ್ಯೂಟ್ ನ ತರಬೇತುದಾರ ಮಹೇಶ್ ಅವರಲ್ಲಿ ತರಬೇತಿ ಪಡೆಯುತ್ತಿದ್ದಾಳೆ.