ಸಂಪಾಜೆ, ಫೆ. 25: ಸಂಪಾಜೆ ಗ್ರಾಮ ಅರೆಕಲ್ಲು ಶ್ರೀ ಅಯ್ಯಪ್ಪ ದೇವಸ್ಥಾನ ಮತ್ತು ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಈಗಾಗಲೇ ಯಶಸ್ವಿಯಾಗಿ ನಡೆದಿದ್ದು, ಸಂಪಾಜೆಯ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಸಭೆ ನಡೆಯಿತು.

ಕಾರ್ಯಕ್ರಮದಲ್ಲಿ ಬ್ರಹ್ಮಕಲ ಶೋತ್ಸವ ಸಮಿತಿ ಅಧ್ಯಕ್ಷ ಬಿ.ಆರ್. ಶಿವರಾಮ್, ಉಪಾಧ್ಯಕ್ಷ ಅನಂತ್ ಎನ್.ಸಿ., ಕಾರ್ಯದರ್ಶಿ ಬಿ.ಜೆ. ಯಶೋಧರ, ಕೋಶಾಧಿಕಾರಿ ಬಾಲಕೃಷ್ಣ ದೇವಜನ, ವೈದಿಕ ಸಮಿತಿ ಅಧ್ಯಕ್ಷ ಶ್ರೀಧರ್ ಭಟ್ ಜೇಡ್ಲ, ಮಹಿಳಾ ಸಮಿತಿ ಅಧ್ಯಕ್ಷೆ ರಮಾದೇವಿ ಬಾಲಚಂದ್ರ ಕಳಗಿ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಶಿವಪ್ಪ ಕೆ.ಬಿ., ಸಂಪಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಮಾರ್ ಚೆದ್ಕಾರ್, ಆರ್ಥಿಕ ಸಮಿತಿ ಅಧ್ಯಕ್ಷ ಪದ್ಮಯ್ಯ ಬೊಳುಗಲ್ಲು ಹಾಗೂ ವಿವಿಧ ಸಮಿತಿ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ದುಡಿದ ವಿವಿಧ ಸಮಿತಿ ಪದಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.