ಸೋಮವಾರಪೇಟೆ, ಫೆ. 27: ಇಲ್ಲಿನ ವಾಹನ ಚಾಲಕರು ಮತ್ತು ಮೋಟಾರು ಕೆಲಸಗಾರರ ಸಂಘದ ವಾರ್ಷಿಕ ಮಹಾಸಭೆ ಅಧ್ಯಕ್ಷ ಎ.ಆರ್. ಭರತ್ ಅಧ್ಯಕ್ಷತೆಯಲ್ಲಿ ನಡೆಯಿತು.
ಸ್ಥಳೀಯ ಕೊಡವ ಸಮಾಜದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಕಾರ್ಯಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು. ಸದಸ್ಯರ ಹಿತ ಕಾಪಾಡುವ ದೃಷ್ಟಿಯಲ್ಲಿ ಸಹಕಾರ ಸಂಘದ ಸ್ಥಾಪನೆಯ ಬಗ್ಗೆ ಸದಸ್ಯರುಗಳು ಸಲಹೆ ನೀಡಿದರು.
ಸಭೆಯಲ್ಲಿ ಉಪಾಧ್ಯಕ್ಷ ಬಾಲಕೃಷ್ಣ ಪೂಜಾರಿ, ಕಾರ್ಯದರ್ಶಿ ರಂಗಸ್ವಾಮಿ, ಸಹಕಾರ್ಯದರ್ಶಿ ಡ್ಯಾನಿಯಲ್, ಎಂ.ಕೆ. ರವಿ, ಖಜಾಂಚಿ ವಿನ್ಸಿ ಪಿಂಟೋ ಸೇರಿದಂತೆ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.