ಕೂಡಿಗೆ, ಫೆ. 27: ಮುಳ್ಳುಸೋಗೆ ಗ್ರಾಮ ಪಂಚಾಯಿತಿಯ 2018-19ನೇ ಸಾಲಿನ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆಯು ತಾಲೂಕು ಸಮಾಜ ಕಲ್ಯಾಣಾಧಿಕಾರಿ ಶೇಖರ್ ಅಧ್ಯಕ್ಷತೆಯಲ್ಲಿ ನಡೆಯಿತು.

ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಾಜಶೇಖರ್ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನಡೆದ ಕಾಮಗಾರಿಗಳ ಬಗ್ಗೆ ಹಾಗೂ ಗ್ರಾ.ಪಂ. ವತಿಯಿಂದ ಕೈಗೊಂಡ ಯೋಜನೆಯ ಕಾಮಗಾರಿಗಳ ಬಗ್ಗೆ ಸವಿಸ್ತಾರವಾದ ಮಾಹಿತಿ ನೀಡಿದರು.

ತಾಲೂಕು ಲೆಕ್ಕ ಪರಿಶೋಧನಾ ಇಲಾಖೆಯ ಅಧಿಕಾರಿ ಪ್ರೀತಂ ಉದ್ಯೋಗ ಖಾತರಿಯ ಹಣಕಾಸಿನ ಖರ್ಚು ವೆಚ್ಚಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು. ಈ ಸಂದರ್ಭ ಅಧಿಕಾರಿಗಳು ಮತ್ತು ಆಡಳಿತ ಮಂಡಳಿಯವರು ಸ್ಥಳ ಪರಿಶೀಲನೆ ನಡೆಸಿದರು. ಸಭೆಯಲ್ಲಿ ಗ್ರಾ.ಪಂ. ಅಧ್ಯಕ್ಷೆ ಭವ್ಯ, ಉಪಾಧ್ಯಕ್ಷ ತಾರಾನಾಥ್ ಸೇರಿದಂತೆ ಗ್ರಾ.ಪಂ. ಸದಸ್ಯರು ಇದ್ದರು.