ವ್ಯವಸ್ಥೆ-ಸಿಐ
ಕುಶಾಲನಗರ, ಫೆ. 27: ಕುಶಾಲನಗರ ಪಟ್ಟಣದಲ್ಲಿ ಸಂಚಾರಿ ನಿಯಮ ಪಾಲನೆಗೆ ವಿಶೇಷ ಸಿಬ್ಬಂದಿಗಳ ತಂಡವನ್ನು ರಚಿಸಿದ್ದು, ಸಮರ್ಪಕ ಸಂಚಾರಕ್ಕೆ ಎಲ್ಲಾ ರೀತಿಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕುಶಾಲನಗರ ಪೊಲೀಸ್ ವೃತ್ತ ನಿರೀಕ್ಷಕ ಮಹೇಶ್ ತಿಳಿಸಿದ್ದಾರೆ.
ಕೆಲವು ತಿಂಗಳ ಹಿಂದೆ ಕುಶಾಲನಗರ ಪಟ್ಟಣದ ಹೃದಯ ಭಾಗದಲ್ಲಿರುವ ಸಂಚಾರಿ ಸಿಗ್ನಲ್ ವ್ಯವಸ್ಥೆ ತಾಂತ್ರಿಕತೆಯ ತೊಂದರೆ ಯಿಂದ ಸ್ಥಗಿತಗೊಳಿಸ ಲಾಗಿತ್ತು. ಇತ್ತೀಚೆಗೆ ಯಾವುದೇ ನ್ಯೂನತೆಯಿಲ್ಲದೆ ಎಫ್‍ಎಂಸಿ ವೃತ್ತದಲ್ಲಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.